ಬೆಂಗಳೂರುರಾಜ್ಯವೈರಲ್ ನ್ಯೂಸ್

ಕೆ.ಎಸ್.​ಆರ್.​ಟಿ.ಸಿ ಬಸ್ ನಲ್ಲೂ ಇನ್ಮುಂದೆ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿ..! ಯಾವಾಗಿನಿಂದ ಜಾರಿಗೆ..?

ನ್ಯೂಸ್ ನಾಟೌಟ್: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಜೊತೆಗೆ ಟಿಕೆಟ್ ರಹಿತ ಪ್ರಯಾಣ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ಇನ್ನು ಮುಂದೆ KSRTC ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ.

ಖಾಸಗಿ ಕಂಪೆನಿಯಿಂದ ಒಂದು ಮಷಿನ್​​ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ(Electronic Ticketing Machine) ಟಿಕೆಟ್ ಮಷಿನ್​​ಗಳ ಖರೀದಿಗೆ ಕೆಎಸ್​ಆರ್​ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ.

ಈ ನೂತನ ಮಷಿನ್​​ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​​ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು ಎನ್ನಲಾಗಿದೆ. ಸದ್ಯ ಈಗ ಇರುವ ಮಷಿನ್​​ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್​ನಿಂದ ಇದು ತಪ್ಪಲಿದೆ ಎಂದು ನಿಗಮ ತಿಳಿಸಿದೆ.

Related posts

ಇಂದು(ಜೂ.15) ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದು(ಜೂ.3)ದಕ್ಷಿಣ ಕನ್ನಡದ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಡಿ.ಸಿ ಮುಲ್ಲೈ ಮುಗಿಲನ್ ಮತಚಲಾವಣೆ

ರಾಮ ಜನ್ಮ ಭೂಮಿಯಾಯ್ತು ಈಗ ಶ್ರೀಕೃಷ್ಣ ಜನ್ಮಭೂಮಿ ವಿವಾದ..! ಮಸೀದಿ ಸಮೀಕ್ಷೆಗೆ ಹೈಕೋರ್ಟ್‌ನಿಂದ ಅನುಮತಿ ಸಿಕ್ಕಿದ್ದೇಗೆ?