ಕರಾವಳಿ

ಗೂನಡ್ಕ ಕಾಂಗ್ರೆಸ್ ಕಾರ್ಯಕರ್ತರ ಸಭೆ

266
Spread the love

ಗೂನಡ್ಕ : ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಬಗ್ಗೆ ಆಲೆಟ್ಟಿ ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಸಂಪಾಜೆ ತಾಲೂಕು ಪಂಚಾಯತ್ ಕ್ಷೇತ್ರದಲ್ಲಿ ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಕಾರ್ಯ ಯೋಜನೆಗಳ ಕುರಿತಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮರವರು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ಪಕ್ಷದ ಪ್ರಮುಖರೊಂದಿಗೆ ಸಭೆಯನ್ನು ನಡೆಸಿದರು.

ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸುರೇಶ್ ಅಮೈ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಮಾಜಿ ಉಪಾಧ್ಯಕ್ಷರಾದ ಆಶಾ ವಿನಯ್ ಕುಮಾರ್, ಸದಸ್ಯರಾದ ವಿಮಲಾ ಪ್ರಸಾದ್, ಮುಖಂಡರಾದ ಸತ್ಯಕುಮಾರ್ ಅಡಿಂಜ, ಜ್ಞಾನಶೀಲನ್ ನೆಲ್ಲಿಕುಮೇರಿ, ಜಿ.ಜಿ.ನವೀನ್ ಕುಮಾರ್ ಸೇರಿದಂತೆ ಇನ್ನೀತರರು ಈ ವೇಳೆ ಉಪಸ್ಥಿತರಿದ್ದರು.

See also  ಸುಳ್ಯದ ಪೈಚಾರಿನಲ್ಲಿ ಅಂಗಡಿಗೆ ನುಗ್ಗಿದ ಕಾರು! ಅಂಗಡಿ ಮಾಲಿಕ ಸ್ವಲ್ಪದರಲ್ಲೆ ಪಾರು!
  Ad Widget   Ad Widget   Ad Widget