Latestದಕ್ಷಿಣ ಕನ್ನಡ

ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆ ಡಿಪಿಆರ್ ತಯಾರಿಸುವುದಕ್ಕೆ ಅನುಮೋದನೆ ;ದ.ಕ. ಸಂಸದ ಬ್ರಿಜೇಶ್ ಚೌಟ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದೇನು?

616
Spread the love

ನ್ಯೂಸ್‌ ನಾಟೌಟ್: ಮಾಣಿಯಿಂದ ಕೊಡಗಿನ ಗಡಿಭಾಗ ಸಂಪಾಜೆವರೆಗಿನ (Mani- Sampaje) ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(DPR) ತಯಾರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. ಈ ಕುರಿತಂತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ದಕ್ಷಿಣ ಕನ್ನಡ ಸಂಸದ (Dakshina Kannada) ಕ್ಯಾ. ಬ್ರಿಜೇಶ್ ಚೌಟ (Brijesh Chowta) ಅವರು ಬರೆದು ಕೊಂಡಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ ಸಂಸದ ಬ್ರಿಜೇಶ್ ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ಲೋಕೋಪಯೋಗಿ ಇಲಾಖೆಯು ತುರ್ತಾಗಿ ಸ್ಪಂದಿಸಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದ್ದಲ್ಲದೇ ಇದಕ್ಕೆ ತಗಲುವ ವೆಚ್ಚ 3.19 ಕೋಟಿ ರೂ.ವನ್ನು ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆಯನ್ನು ಕೂಡ ನೀಡಿ ಆದೇಶ ಹೊರಡಿಸಿದೆ. ಇನ್ನು ಮುಂದೆ ಶೀಘ್ರದಲ್ಲೇ ಮಾಣಿ-ಸಂಪಾಜೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸುವುದಕ್ಕೆ ಏಜೆನ್ಸಿ ಆಯ್ಕೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆಯಲಿದೆ.

 

See also  ಅರಂಬೂರು: ಚಲಿಸುತ್ತಿದ್ದ ಬೈಕ್ ಸ್ಕಿಡ್..! ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಸವಾರನಿಗೆ ಗಂಭೀರ ಗಾಯ
  Ad Widget   Ad Widget   Ad Widget   Ad Widget