ನ್ಯೂಸ್ ನಾಟೌಟ್: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ನೊಣಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಹೆಜ್ಜೇನು ನೊಣಗಳ ದಾಳಿಯಿಂದ ಒಟ್ಟು 22 ವಿದ್ಯಾರ್ಥಿಗಳ ಪೈಕಿ 19 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು, ಸಿಬ್ಬಂದಿಗೆ ಗಾಯವಾಗಿದೆ. ವಿದ್ಯಾರ್ಥಿಗಳು ಕೊಠಡಿಗೆ ಮಧ್ಯಾಹ್ನ ಬರುತ್ತಿದ್ದಂತೆ ಹೆಜ್ಜೇನು ನೊಣಗಳು ದಾಳಿ ನಡೆಸಿವೆ. ಅಲ್ಲೇ ಇದ್ದ ಶಿಕ್ಷಕರು ವಿದ್ಯಾರ್ಥಿಗಳ ಬಚಾವ್ ಮಾಡಲು ಪ್ರಯತ್ನಿಸಿದ್ದಾರೆ. ಆಗ ಅವರ ಮೇಲೆಯೂ ಹೆಜ್ಜೇನು ನೊಣಗಳು ದಾಳಿ ನಡೆಸಿವೆ.
ತಕ್ಷಣ ಸ್ಥಳೀಯ ಮುಖಂಡರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಅವರನ್ನು ಕಣ್ಣಂಗಾಲ ಉಪ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.