ಕ್ರೈಂವೈರಲ್ ನ್ಯೂಸ್

ಸರ್ಕಾರಿ ಬಸ್ ಗೆ ಕಾರು ಡಿಕ್ಕಿ..! ದೇಗುಲಕ್ಕೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸಾವು..!

248

ನ್ಯೂಸ್‌ ನಾಟೌಟ್‌: ಸರ್ಕಾರಿ ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದವರು ಎನ್ನಲಾಗಿದೆ.

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಎಂದು ಗುರುತಿಸಲಾಗಿದೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Click

https://newsnotout.com/2024/08/drunk-bengaluru-auto-rikshaw-kannada-news-viral-protest/
See also  ಆಗಸದಲ್ಲೇ ಪ್ಯಾರಾಚೂಟ್ ಗಳ ನಡುವೆ ಡಿಕ್ಕಿ..! ಪ್ಯಾರಾಗ್ಲೈಡರ್ ಅರಣ್ಯದೊಳಗೆ ಬಿದ್ದು ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget