ಶಿಕ್ಷಣ

ಮುಷ್ಕರ ವಾಪಾಸ್‌ ಪಡೆದ ಸರ್ಕಾರಿ ನೌಕರರು

ನ್ಯೂಸ್‌ನಾಟೌಟ್‌: ರಾಜ್ಯ ಸರ್ಕಾರಿ ನೌಕರರ ಮುಷ್ಕರದ ಬಗ್ಗೆಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶೇಕಡಾ 17 ವೇತನ ಹೆಚ್ಚಳಕ್ಕೆ ನಿರ್ಧರಿಸಿದ್ದಾರೆ. ಈ ಆದೇಶವನ್ನು ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್​ ಪಡೆದುಕೊಂಡಿದೆ.

ಸಿಎಂ ಸೂಚನೆ ಮೇರೆಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಏಪ್ರಿಲ್‌ 1ರಿಂದ ನೂತನ ಆದೇಶ ಜಾರಿಯಾಗಲಿದೆ. ಅದೇ ರೀತಿ ಹಳೇ ಪಿಂಚಣಿ ಯೋಜನೆ ಅಧ್ಯಯನಕ್ಕಾಗಿ ಸಮಿತಿ ರಚಿಸಿದ್ದು, 2 ತಿಂಗಳಲ್ಲಿ ವರದಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಒಪ್ಪಿಗೆ ಸೂಚಿಸಿ ಮುಷ್ಕರ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್​.ಷಡಕ್ಷರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು (ಮಾರ್ಚ್​ 1) ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿ ಸಮಸ್ಯೆಗಳು ಎದುರಾಗಿದ್ದವು. ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಿಸಿ ಆದೇಶ ಹೊರಡಿಸಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರು ಮುಷ್ಕರ ವಾಪಾಸ್ ಪಡೆದಿರುವುದಾಗಿ ಘೋಷಿಸಿದ್ದಾರೆ.

Related posts

ಅಂತರ್ ಕಾಲೇಜು “ಯುವ ಸಂಭ್ರಮ”: ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಡಿಗೆ ಪ್ರಶಸ್ತಿಗಳ ಗರಿ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸ ಕೋರ್ಸ್ ಪ್ರಾರಂಭಿಸಲು ಎ.ಐ.ಸಿ.ಟಿ.ಇ. ಅನುಮತಿ

ಪಿಕ್‌ ನಿಕ್‌ ಹೋದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ..! ಬಸ್ ಸಿಬ್ಬಂದಿಯ ಆಟ ಬಯಲಾದದ್ದೇಗೆ..?