ದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಸರ್ಕಾರಿ ಶಾಲೆಯ ಕೊಠಡಿಯನ್ನೇ ಸ್ವಿಮ್ಮಿಂಗ್‌ ಪೂಲ್‌ ಮಾಡಿದ್ರಾ..? ಸಮವಸ್ತ್ರದಲ್ಲೇ ಈಜಿದ ಮಕ್ಕಳು..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ದೇಶಾದ್ಯಂತ ಹೀಟ್‌ ವೇವ್‌ ಜೋರಾಗಿದೆ. ಬಿಸಿಲಿನ ತಾಪಕ್ಕೆ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆಯನ್ನು ಘೋಷಿಸಿದ್ದಾರೆ. ಆದರೆ ಉತ್ತರಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಉಪಾಯವೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೊಠಡಿಯನ್ನು ಈಜುಕೊಳವನ್ನಾಗಿ ಮಾಡಲಾಗಿದೆ.

ಶಾಲಾ ಮಕ್ಕಳು ಸಮವಸ್ತ್ರದಲ್ಲಿಯೇ ನೀರಿನಲ್ಲಿ ಈಜುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಈ ವೀಡಿಯೋವನ್ನು ಬಳಕೆದಾರರೊಬ್ಬರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದು, ಬಿರು ಬೇಸಿಗೆಯ ನಡುವೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಈ ಐಡಿಯಾವನ್ನು ಮಾಡಿದ್ದಾರೆ. ಯುಪಿಯ ಕನೌಜ್‌ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯನ್ನು ವಿದ್ಯಾರ್ಥಿಗಳಿಗೆ ಈಜುಕೊಳವನ್ನಾಗಿ ಮಾಡಲಾಗಿದೆ.

ಶಾಲಾ ಅಧಿಕಾರಿಗಳ ಪ್ರಕಾರ, ಬೆಳೆ ಕೊಯ್ಲು ಮತ್ತು ವಿಪರೀತ ಬಿಸಿಲಿನಿಂದಾಗಿ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತಾರೆ. ಹೀಗಾಗಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಾಪಾಡಿಕೊಳ್ಳಲು ಇದನ್ನು ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪರ-ವಿರೋಧ ಕಾಮೆಂಟ್‌ಗಳು ಬರುತ್ತಿವೆ.

Related posts

ನಾಯಿ ಮಾಂಸ ಮಾರಾಟ ದಂಧೆ ಎಂದು ಪ್ರತಿಭಟಿಸಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್.ಐ.ಆರ್..! ಪುನೀತ್ ಪರವಾಗಿ ನಿಂತ ಪ್ರತಾಪ್ ಸಿಂಹನ ಮೇಲೂ ಕೇಸ್..!

ಕೈ ಕಾಲು ಕತ್ತರಿಸಿ ಬಿಜೆಪಿ ಕಾರ್ಯಕರ್ತೆಯ ಹತ್ಯೆ..! ಡ್ರಮ್‌ ನೊಳಗಿದ್ದ ಮೃತದೇಹ ಸಿಕ್ಕಿದ್ದೇಗೆ..?

ಮಂಗಳೂರು: ಹಾಡಹಗಲೇ ಬಂದೂಕಿನಿಂದ ಸಿಬ್ಬಂದಿಯನ್ನು ಬೆದರಿಸಿ ಬ್ಯಾಂಕ್ ದರೋಡೆ..! ಹಣ ಮತ್ತು ಚಿನ್ನಾಭರಣಗಳೊಂದಿಗೆ ಕಾರಿನಲ್ಲಿ ಪರಾರಿ..!