Uncategorized

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜಡೆ ಹಿಡಿದು ಎಳೆದಾಡಿದ ಜಿಲ್ಲಾ ಪಂಚಾಯತ್ ಸದಸ್ಯ

ನ್ಯೂಸ್ ನಾಟೌಟ್: ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಜಿಲ್ಲಾ ಪಂಚಾಯತ್ ಸದಸ್ಯನೊಬ್ಬ ಹಲ್ಲೆ ನಡೆಸಿರುವ ಘಟನೆ ನಡೆದಿದೆ.  ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಸೀಕೆರೆ ತಾಲೂಕಿನ ನೇರ್ಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂಜುಕೋರರನ್ನು ಸಬ್ ಇನ್ಸ್ ಪೆಕ್ಟರ್ ಶೋಭಾ ಭರಮಕ್ಕನವರ್ ಅವರು ಬಂಧಿಸಿದ್ದರು. ಈ ಬಗ್ಗೆ ವಿಚಾರಿಸಲು ಜಾವಗಲ್ ಠಾಣೆಗೆ ಶ್ರೀನಿವಾಸ್ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕುಡಿದಿದ್ದ ಶ್ರೀನಿವಾಸ್ ಪೊಲೀಸ್ ಠಾಣೆಗೆ ನುಗ್ಗಿ ಎಸ್‌ಐ ಅವರನ್ನು ಎಳೆದೊಯ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಜಾವಗಲ್ ಹೊರವಲಯದಲ್ಲಿರುವ ಜೂಜು ಅಡ್ಡೆಗಳ ಮೇಲೆ ಆಗಾಗ್ಗೆ ದಾಳಿ ನಡೆಸುತ್ತಿರುವುದಕ್ಕೆ ಶ್ರೀನಿವಾಸ್ ಆಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಪೊಲೀಸರು ಶ್ರೀನಿವಾಸ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Related posts

74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ,ಸ್ಟಾಫ್ ನರ್ಸ್ ಚಿಕಿತ್ಸೆ ಫಲಿಸದೆ ಸಾವು

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಮತ್ತು ಯುವ ರೆಡ್‌ಕ್ರಾಸ್ ಘಟಕದ ಉದ್ಘಾಟನೆ

“ಕಾಂಗ್ರೆಸ್ ನವರು 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಮೋಸ ಮಾಡಿದ್ದಾರೆ” ಸಿದ್ದರಾಮಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಬೊಮ್ಮಾಯಿ