ದೇಶ-ಪ್ರಪಂಚವೈರಲ್ ನ್ಯೂಸ್

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ, ವಾರಣಾಸಿ ಜಿಲ್ಲಾ ಕೋರ್ಟ್ ನಿಂದ ಮಹತ್ವದ ತೀರ್ಪು

ನ್ಯೂಸ್ ನಾಟೌಟ್: ಜ್ಞಾನವಾಪಿ ಮಸೀದಿ ವಿವಾದದಲ್ಲಿ ಭಾರಿ ತಿರುವು ದೊರಕಿದ್ದು, ವಾರಣಾಸಿ ಜಿಲ್ಲಾ ಕೋರ್ಟ್ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಲಾಗಿದೆ ಎಂದು ವರದಿ ತಿಳಿಸಿದೆ.

7 ದಿನಗಳ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಉಳಿದಂತೆ ತೀರ್ಪುಗಳನ್ನು ಸುಪ್ರಿಂಕೋರ್ಟ್ ಮುಂದೆ ವಿಚಾರಣೆ ನಡೆಸಲಿದೆ.

ಜ್ಞಾನವಾಪಿ ಮಸೀದಿಯಲ್ಲಿ ಸೀಲ್ ಮಾಡಲಾದ ‘ವ್ಯಾಸ’ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸುವ ಹಕ್ಕು ಹಿಂದೂಗಳಿಗೆ ಇದೆ ಎಂದು ವಾರಾಣಸಿ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಇದರೊಂದಿಗೆ 31 ವರ್ಷಗಳ ಬಳಿಕ ‘ವ್ಯಾಸರ ನೆಲಮಾಳಿಗೆ’ ಎಂದೇ ಕರೆಯಲಾಗುವ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಮತ್ತೆ ಅವಕಾಶ ಸಿಕ್ಕಂತಾಗಿದೆ. ಇಲ್ಲಿ ಪೂಜೆ ನಡೆಸಲು ಅನುಕೂಲವಾಗಲು ಮುಂದಿನ ಏಳು ದಿನಗಳಲ್ಲಿ ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾ ಆಡಳಿತಕ್ಕೆ ಕೋರ್ಟ್ ಸೂಚನೆ ನೀಡಿದೆ.

ಮುಚ್ಚಿದ 10 ಸೆಲ್ಲಾರ್ ಗಳಿಗೆ ಪೂಜೆ ಸಲ್ಲಿಸದಂತೆ ಆದೇಶವಾಗಿತ್ತು, ಅದಕ್ಕೆ ಮತ್ತೆ ಪೂಜೆ ಮಾಡುವಂತೆ ಹಿಂದಿನ ಆದೇಶ ತೆರವುಗೊಳಿಸಿ ಹೊಸ ಆದೇಶ ಹೊರಡಿಸಿದೆ.
ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ದ ವೈಶಿಷ್ಟ್ಯಗಳು ಹಾಗೂ ಅದರ ಸ್ವರೂಪವನ್ನು ಪತ್ತೆ ಮಾಡುವುದಕ್ಕಾಗಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ನಾಲ್ವರು ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮುಂದೂಡಿ 2023ರ ಮೇ 19ರಂದು ನೀಡಿದ್ದ ಆದೇಶ, ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ದ ಕಾಲಮಾನ ಪತ್ತೆಗಾಗಿ ಅಲಹಾಬಾದ್‌ ಹೈಕೋರ್ಟ್‌ ಕಳೆದ ವರ್ಷ ಮೇ 12ರಂದು ನೀಡಿದ್ದ ನಿರ್ದೇಶನದಂತೆ ನಡೆಯಬೇಕಿದ್ದ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಮುಂದೂಡಿ ತಾನು ನೀಡಿದ್ದ ಆದೇಶವನ್ನು ತೆರವುಗೊಳಿಸುವಂತೆಯೂ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

Related posts

ಮುದುಕರನ್ನು ಯುವಕರನ್ನಾಗಿಸುವ ಟೈಂ ಮೆಷಿನ್..! 35 ಕೋಟಿ ರೂಪಾಯಿ ವಂಚಿಸಿದ ದಂಪತಿಯ ಕಹಾನಿ ಇಲ್ಲಿದೆ..!

ಜನತಾ ದರ್ಶನದಲ್ಲಿ ಬಿ.ವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ಧ ಸಿಎಂ ಸಿದ್ದುಗೆ ದೂರು ನೀಡಿದ್ಯಾರು? ಆತನ ಪತ್ನಿಗೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದೇಕೆ?

ವಿಪಕ್ಷ ನಾಯಕನ ಕುತ್ತಿಗೆಗೆ ಚಾಕು ಇರಿತ..! ದಾಳಿಕೋರ ವಶಕ್ಕೆ..!