ರಾಜಕೀಯ

Gruhalakshmi Yojana:ಗೃಹಲಕ್ಷ್ಮೀ ಯೋಜನೆಗೆ ಜು.19ರಿಂದ ಅರ್ಜಿ ಸಲ್ಲಿಕೆ ಆರಂಭ ‘ಗ್ಯಾರಂಟಿ’,ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಹೇಳಿದ್ದೇನು?

ನ್ಯೂಸ್ ನಾಟೌಟ್ : ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗಾಗಿ ದಿನಾಂಕ ನಿಗದಿಯಾಗಿದೆ. ಹಲವಾರು ಸವಾಲು, ಗೊಂದಲಗಳನ್ನು ನಿವಾರಿಸಿ ಕಡೆಗೂ ಅರ್ಜಿ ಸಲ್ಲಿಕೆ ದಿನಾಂಕವನ್ನು ಕಾಂಗ್ರೆಸ್ ಫಿಕ್ಸ್ ಮಾಡಿದೆ.

ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ರಾಷ್ಟ್ರೀಯ ನಾಯಕರಿಂದಲೇ ಚಾಲನೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ.ಈ ಕುರಿತಂತೆ ನಾವು ಚರ್ಚೆ ನಡೆಸಿ ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆದಿದ್ದು, ಅದಕ್ಕವರು ಸಮ್ಮತಿಯನ್ನೂ ಸೂಚಿಸಿದ್ದಾರೆ. ಎಲ್ಲವೂ ಅಂದು ಕೊಂಡಂತೆ ನಡೆದರೆ ಜು.17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನೆ ಮಾಡಲಾಗುವುದು ಎಂದವರು ಹೇಳಿದರು. ಸೋನಿಯಾ ಗಾಂಧಿ ಅವರಿಗೂ ಅಹ್ವಾನ ನೀಡಲಾಗಿದ್ದು, ರಾಷ್ಟ್ರೀಯ ನಾಯಕರು ಈ ಬಗ್ಗೆ ಏನು ಅಭಿಪ್ರಾಯ ನೀಡುತ್ತಾರೆ ಅನ್ನೋದಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ.ಇಲ್ಲದೇ ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದು ಹೇಳಿದರು.

ಆಗಸ್ಟ್ 15ರಿಂದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದ್ದು, ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ ಎಂದು ಹೇಳಿದರು. ಆದರೆ ಫಲಾನುಭವಿ ಯಜಮಾನಿ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್‌.ಟಿ. ಪಾವತಿದಾರರಾಗಿರಬಾರದು. ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಲ್ಲಿ ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್​ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನೆಯಾಗುತ್ತದೆ. ಸಾರ್ವಜನಿಕರಿಗೆ ಮೊಬೈಲ್ ಆ್ಯಪ್ ರಿಲೀಸ್ ಮಾಡಲ್ಲ ಎಂದರು ಹೇಳಿದರು.

Related posts

ಮತದಾನ ಮಾಡಿದ ಬಳಿಕ ಗ್ರಾಹಕರಿಗೆ ಉಚಿತ ಆಹಾರ..! ಹೋಟೆಲ್‌ ಗಳಿಗೆ ಹೈಕೋರ್ಟ್ ನೀಡಿದ ಸೂಚನೆಗಳೇನು..?

ಪರ್ವೇಜ್ ಮುಷರಫ್ ನಿಧನದ ಬೆನ್ನಲ್ಲೇ ವೀಡಿಯೋ ವೈರಲ್, ರಾಹುಲ್ ಗಾಂಧಿಯನ್ನು ಹಾಡಿ ಹೊಗಳಿದ್ದರು ಪಾಕಿಸ್ತಾನದ ಮಾಜಿ ಅಧ್ಯಕ್ಷ

ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸುವಂತೆ ಬಿಜೆಪಿ ಸಂಸದರಿಗೆ ಮೋದಿ ಸೂಚಿಸಿದ್ದೇಕೆ? ಎನ್‌ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?