ನ್ಯೂಸ್ ನಾಟೌಟ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಮೊದಲ ಚುನಾವಣೆಯಲ್ಲಿ ಗೆಲುವಿನ ಸಿಕ್ಸರ್ ಸಿಡಿಸಿದ್ದಾರೆ.
ರಿವಾಬಾ ಗುಜಾರಾತ್ ನ ಜುಮ್ನಗರ್ ಉತ್ತರ ಕ್ಷೇತ್ರದಿಂದ 40 ಸಾವಿರ ಮತಗಳ ಅಂತರದಿಂದ ಗೆಲುವು ತನ್ನದಾಗಿಸಿಕೊಂಡಿದ್ದಾರೆ. ಪ್ರತಿ ಸ್ಪರ್ಧಿ ಆಮ್ ಆದ್ಮಿ ಪಕ್ಷದ ಕಸರ್ನ್ ಕರ್ಮುರ ಅವರನ್ನು ಸೋಲಿಸಿದರು. ರಿವಾಬಾ ಅವರ ಹೆಸರನ್ನು ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಘೋಷಣೆ ಮಾಡಲಾಗಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆದ ಇವರು ಮಹಿಳಾ ವಿಭಾಗದ ಕರ್ಣಿ ಸೇನಾದ ಅಧ್ಯಕ್ಷರಾಗಿದ್ದಾರೆ. 182 ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಗುಜರಾತ್ ನಲ್ಲಿ ಭರ್ಜರಿ ರೋಡ್ ಶೋ ನಡೆದಿದೆ.