ಕರಾವಳಿ

ಬೆಳ್ತಂಗಡಿ :ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್..?, ಮಾಜಿ ಶಾಸಕ ವಸಂತ ಬಂಗೇರ ಮನವಿಗೆ ಸ್ಪಂದಿಸಿದ ಗೃಹಸಚಿವ ಪರಮೇಶ್ವರ್‌

223

ನ್ಯೂಸ್‌ ನಾಟೌಟ್‌: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಕಳೆದ 11 ವರ್ಷಗಳ ಹಿಂದೆ ಭೀಕರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟದ ಕಾವು ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದು, ನೈಜ ಆರೋಪಿಗಳನ್ನು ಬಂಧಿಸಬೇಕೆನ್ನುವ ಒತ್ತಾಯಗಳು ಕೇಳಿ ಬರುತ್ತಿವೆ. ಇದೀಗ ಹೋರಾಟದ ಮುಂದಾಳತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಜೀವಕ್ಕೆ ತೊಂದರೆಯಾಗುವ ಸಾಧ್ಯತೆಗಳಿರುವ ಕಾರಣ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

ಈ ಕುರಿತು ಮಾಜಿ ಶಾಸಕ ವಸಂತ ಬಂಗೇರ ಅವರು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಹೋರಾಟ ಮಾಡುವ ಉದ್ದೇಶದಿಂದ ರಕ್ಷಣೆಗಾಗಿ ಇಬ್ಬರು ಗನ್ ಮ್ಯಾನ್ ನೀಡಲು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ ಗೃಹ ಸಚಿವ ಪರಮೇಶ್ವರ್ ಅವರು ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್ ಅವರಿಗೆ ಗನ್ ಮ್ಯಾನ್ ನೀಡಲು ಅಧಿಕೃತ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಒಂದು ತಿಂಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಗನ್ ಮ್ಯಾನ್ ಪಡೆಯಲು ಮನವಿ ಪತ್ರ ನೀಡಿದ್ದರು. ಇದರ ಬಗ್ಗೆ ಎಸ್ಪಿ ಗುಪ್ತಚರ ಇಲಾಖೆಗೆ ವರದಿ ನೀಡಲು ಆದೇಶ ನೀಡಿದ್ದರು. ಗುಪ್ತಚರ ಇಲಾಖೆಯ ವರದಿಯಲ್ಲಿ ಯಾವುದೇ ಜೀವ ಬೆದರಿಕೆಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಇಲ್ಲವೆಂದು ಎಸ್ಪಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದರು. ಆದ್ದರಿಂದ ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆ ಮುಂದಾಗಿರಲಿಲ್ಲ. ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮನವಿಗೆ ಗೃಹ ಸಚಿವರು ಸ್ಪಂದಿಸಿದ್ದಾರೆ.

See also  Soujanya Case: ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ, ಬಂಗೇರ ಹೇಳಿಕೆಯನ್ನು ತಿರುಚಿದವೇ ಮಾಧ್ಯಮಗಳು..? ಅಂದು ನಿಜವಾಗಿಯೂ ಬಂಗೇರ ಹೇಳಿದ್ದಾದರೂ ಏನು? ಇಲ್ಲಿದೆ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget