ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಆ.11ರಂದು ಶ್ರೀ ಗುರು ರಾಯರ 354ನೇ ಆರಾಧನಾ ಮಹೋತ್ಸವದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬೆಳಗ್ಗೆ 7ರಿಂದ ಮಹಾಗಣಪತಿ ಹೋಮ, ಪವಮಾನ ಹೋಮ, ಪವಮಾನ ಅಭಿಷೇಕ, ಬ್ರಾಹ್ಮಣಾರಾಧನೆ, ಮಹಾಪೂಜೆ ಮಂತ್ರಾಕ್ಷತೆ, ಅನ್ನಸಂತರ್ಪಣೆ ಕ್ರಮವಾಗಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರ ತನಕ ಶ್ರೀ ಚೆನ್ನಕೇಶವ ಭಜನಾ ಮಂಡಳಿ ಇವರಿಂದ ಭಜನೆ, 11.30 ರಿಂದ 1ರ ತನಕ ರಾಜೇಶ್ ರೈ ಮೇನಾಲರಿಂದ ಹರಿಕಥೆ ಕಲಾಕ್ಷೇಪ, ಸಂಜೆ 5 ಗಂಟೆಯಿಂದ ಶ್ರೀ ಸದಾಶಿವ ಭಜನಾ ಮಂಡಳಿ ಆಲೆಟ್ಟಿ ಇವರಿಂದ ಭಜನಾ ಕಾರ್ಯಕ್ರಮ, ಸಂಜೆ 6 ಗಂಟೆಯಿಂದ ಪಲ್ಲಕ್ಕಿ ಸೇವೆ, ತೊಟ್ಟಿಲು ಸೇವೆ, ಅಷ್ಟಾವಧನ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಎಲ್ಲ ಭಕ್ತರನ್ನು ಅಧ್ಯಕ್ಷರಾದ ಶ್ರೀ ಕೃಷ್ಣ ಸೋಮಯಾಗಿ, ಸರ್ವ ಟ್ರಸ್ಟಿಗಳು ಬೃಂದಾವನ ಸೇವಾ ಟ್ರಸ್ಟ್ (ರಿ) ಸುಳ್ಯ ಇವರು ಹಾಗೂ ಅಧ್ಯಕ್ಷರು ಮತ್ತು ಸದಸ್ಯರು ಶ್ರೀ ಗುರುರಾಘವೇಂದ್ರ ಮಠ ಸುಳ್ಯ ಇವರು ಸ್ವಾಗತಿಸಿದ್ದಾರೆ.