ಕರಾವಳಿಯಕ್ಷಯಾನ

ರಂಗಸ್ಥಳದಲ್ಲಿಯೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ವಿಧಿವಶ

374

ನ್ಯೂಸ್ ನಾಟೌಟ್ :ಯಕ್ಷಗಾನದ ಮೇರು ನಟ ಶ್ರೀ ದುರ್ಗಾಪರಮೇಶ್ವರೀ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ಅವರು ಯಕ್ಷಗಾನದ ವೇಳೆ ರಂಗಸ್ಥಳದಲ್ಲಿಯೇ ಕುಸಿದು ಬಿದ್ದು ಅಸುನೀಗಿದ್ದಾರೆ.

ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಸರಸ್ವತಿ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ತ್ರಿಜನ್ಮ ಮೋಕ್ಷ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದಿದ್ದಾರೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು ಯಕ್ಷಗಾನದಲ್ಲಿ ಪ್ರಸಿದ್ದಿ ಪಡೆದವರು.2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದ ಅವರು ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದರು.ಅನೇಕ ಪ್ರಶಸ್ತಿ, ಪುರಸ್ಕಾರಗಳಿಗೆ ಬಾಜನರಾಗಿದ್ದ ಗುರುವಪ್ಪ ಅವರ ಅಗಲುವಿಕೆ ಅವರ ಅಭಿಮಾನಿಗಳಿಗೆ ತೀವ್ರ ಬೇಸರವನ್ನುಂಟು ಮಾಡಿದೆ.

See also  ಆನೆಗುಂಡಿ: ಬೆಕ್ಕು ನುಂಗಿ ಒದ್ದಾಡುತ್ತಿದ್ದ ಹೆಬ್ಬಾವಿನ ದೇಹದೊಳಗೆ 11 ಏರ್‌ ಬುಲ್ಲೆಟ್ ಪತ್ತೆ..! ಹಲವು ವರ್ಷಗಳ ಹಿಂದೆ ಏರ್ ಗನ್ ನಿಂದ ಶೂಟ್ ಮಾಡಿರುವ ಶಂಕೆ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget