ಸುಳ್ಯ

ಗುತ್ತಿಗಾರು: ಕಣ್ಣಿನ ಉಚಿತ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ, ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇತರ ಸಂಘ ಸಂಸ್ಥೆಗಳ ಸಹಯೋಗ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ (ಜುಲೈ 10) ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಾಕಿಶೋರ್ ಶಿಬಿರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಣ್ಣಿನ ವಿಭಾಗದ ಪ್ರೊಫೆಸರ್ ಡಾ. ಮಹೇಶ್ ಬಾಬು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಹಾಗೂ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಜಯರಾಮ್ ಉಪಸ್ಥಿತರಿದ್ದರು. ಶಿಬಿರದಲ್ಲಿ 70 ಸದಸ್ಯರು ಉಚಿತ ಕಣ್ಣಿನ ತಪಾಸಣೆಯ ಪ್ರಯೋಜನ ಪಡೆದುಕೊಂಡರು. ಹಾಗೂ 20 ಸದಸ್ಯರನ್ನು ಹೆಚ್ಚಿನ ಕಣ್ಣಿನ ಪೊರೆ ತಪಾಸಣೆ ಹಾಗೂ ಉಚಿತ ಶಸ್ತ್ರ ಚಿಕಿತ್ಸೆಗೆ ಕೆವಿಜಿ ಮೆಡಿಕಲ್ ಕಾಲೇಜಿಗೆ ಶಿಫಾರಸು ಮಾಡಲಾಯಿತು.

Related posts

ಕನಸ ಬಿತ್ತಿದಾತ

ಪುತ್ತೂರು ಉಪವಿಭಾಗದ ಪ್ರಭಾರ ಡಿವೈಎಸ್‌ಪಿಯಾಗಿ ಡಾ.ಗಾನಾ ಪಿ.ಕುಮಾರ್ ಕರ್ತವ್ಯಕ್ಕೆ ಹಾಜರು

ಸುಳ್ಯ: ಪಯಸ್ವಿನಿ ನದಿಯಲ್ಲಿ ನಿವೃತ್ತ ಶಿಕ್ಷಕನ ಶವ ಪತ್ತೆ