ಕ್ರೈಂರಾಜ್ಯವೈರಲ್ ನ್ಯೂಸ್

ಕೊರಿಯರ್‌ ನಲ್ಲಿ ಬಂದ ‘ಹೇರ್ ಡ್ರೈಯರ್’ ಸ್ಪೋಟ.! ಮೃತ ಯೋಧನ ಪತ್ನಿಯ ಎರಡೂ ಕೈಗಳೂ ಕಟ್..!

ನ್ಯೂಸ್ ನಾಟೌಟ್ : ಹೇರ್ ಡ್ರೈಯರ್ ಸ್ಪೋಟಗೊಂಡು ಮೃತ ಯೋಧನ ಪತ್ನಿಯ ಎರಡು ಕೈಗಳು ತುಂಡಾಗಿರುವ ಘಟನೆ ಬಾಗಲಕೋಟೆಯ ಇಳಕಲ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಜಿ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪಾಪಣ್ಣ ಮೃತಪಟ್ಟಿದ್ದರು.

ಶಶಿಕಲಾ ಎಂಬುವರ ಹೆಸರು, ನಂಬರ್ ಹೊಂದಿದ್ದ ಪಾರ್ಸಲ್ ಕೊರಿಯರ್‌ ಬಂದಿತ್ತು. ಶಶಿಕಲಾ ಅವರು ಕೂಡ ಮೃತ ಯೋಧನ ಪತ್ನಿಯಾಗಿದ್ದರು. ಕೊರಿಯರ್‌ನವರು ಶಶಿಕಲಾ ಅವರಿಗೆ ಕರೆ ಮಾಡಿದ್ದರು. ಆದರೆ ಅವರು ಊರಲ್ಲಿ ಇರದ ಕಾರಣ ಬಸಮ್ಮನಿಗೆ ಕೊರಿಯರ್ ಅನ್ನು ಪಡೆದು ತೆಗೆದು ನೋಡಲು ತಿಳಿಸಿದ್ದರು. ತೆಗೆದು ನೋಡಿದಾಗ ಹೇರ್ ಡ್ರೈಯರ್ ಇತ್ತು. ಈ ವೇಳೆ ಪಕ್ಕದ ಮನೆಯವರು ಹೇರ್ ಡ್ರೈಯರ್ ಆನ್ ಮಾಡಲು ತಿಳಿಸಿದ್ದಾರೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಬ್ಲಾಸ್ಟ್ ಆಗಿ ಜೋರಾಗಿ ಸದ್ದಾಗಿದೆ.

ಬ್ಲಾಸ್ಟ್ ಆದ ಪರಿಣಾಮ ಬಸಮ್ಮನ ಎರಡೂ ಕೈಗಳು ತುಂಡಾಗಿದ್ದು, ಬೆರಳುಗಳು ಛಿದ್ರ ಛಿದ್ರವಾಗಿದೆ. ಮನೆಯಲ್ಲಿ ರಕ್ತ ಚಿಮ್ಮಿದ್ದು, ಬಸಮ್ಮನನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಶಿಕಲಾ ಅವರನ್ನು ವಿಚಾರಿಸಿದಾಗ ನಾನು ಹೇರ್ ಡ್ರೈಯರ್ ಆರ್ಡರ್ ಮಾಡೇ ಇಲ್ಲ. ಆದರೆ ನನ್ನ ಹೆಸರಲ್ಲಿ ಹೇರ್ ಡ್ರೈಯರ್ ಬಂದಿದೆ. ಆರ್ಡರ್ ಮಾಡಿದವರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂದು ಪೊಲೀಸರಿಂದ ತನಿಖೆ ನಡೆದಿದೆ. ಸದ್ಯ ಹೇರ್ ಡ್ರೈಯರ್ ವಿಶಾಖಪಟ್ಟಣದಲ್ಲಿ ಉತ್ಪಾದನೆಯಾಗಿದ್ದು, ಕೊರಿಯರ್ ಬಾಗಲಕೋಟೆಯಿಂದ ಬಂದಿದೆ ಎಂದು ತಿಳಿದು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/11/ar-rehaman-kannada-news-viral-news-mohini-dey/
https://newsnotout.com/2024/11/lady-dance-in-tawel-and-misbehaviour-infront-of-india-gate/
https://newsnotout.com/2024/11/govt-site-kannada-news-school-police-district-administration/
https://newsnotout.com/2024/11/notice-lokayukta-sp-kannada-news-sm-siddaramayya/
https://newsnotout.com/2024/11/indian-marriage-kannada-news-viral-video-money-pouring-viral-d/
https://newsnotout.com/2024/11/kannada-news-viral-video-pakisthan-beggers-family-donate-food/

Related posts

ಜ್ವರದಿಂದ ಬಳಲುತ್ತಿದ್ದ ಯುವತಿ ನಿಧನ

ಗೂನಡ್ಕ: ಬೆತ್ತಲೆಯಾಗಿ ರಸ್ತೆಯಲ್ಲೆಲ್ಲ ಓಡಾಡಿದವನ ಲಾರಿ ಹತ್ತಿಸಿ ಕಳಿಸಿದ್ರು, ಹಣ, ಊಟ ಕೊಟ್ಟು ಮಾನವೀಯತೆ ಮೆರೆದ ಕಲ್ಲುಗುಂಡಿ ಪೊಲೀಸ್..!

ಗೂನಡ್ಕ ಬೈಲೆಯಲ್ಲಿ ಮಸ್ತ್ ‘ಆಟಿ’ ಗೌಜಿ, ಕೆಸರಿನ ಗದ್ದೆಯಲ್ಲಿ ಮಿಂದೆದ್ದ ಯುವಕ-ಯುವತಿಯರು, ವಯಸ್ಸನ್ನೇ ಮರೆತು ಉತ್ಸಾಹ ಮೆರೆದ ಅಜ್ಜ-ಅಜ್ಜಿಯರು..!