ನ್ಯೂಸ್ ನಾಟೌಟ್ :79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ಕೆವಿಜಿ ಕಾನೂನು ಕಾಲೇಜಿನಲ್ಲಿ ಆ. 14ರಂದು ನೆರವೇರಿಸಲಾಯಿತು.
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕವೃಂದ, ಸಿಬ್ಬಂದಿಗಳು ಹಾಗು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ನಿರ್ದೇಶನದಂತೆ ಹರ್ ಘರ್ ತಿರಂಗ್ ಅಭಿಯಾನದಲ್ಲಿ ಹಲವು ಮನೆಗೆ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.