ಕ್ರೈಂ

ತನ್ನನ್ನು ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ನಿತ್ಯ ಕಿರುಕುಳ, ಮನನೊಂದು ಅಪ್ರಾಪ್ತೆ ಆತ್ಮಹತ್ಯೆ 

ನ್ಯೂಸ್‌ ನಾಟೌಟ್‌:ಮುಸ್ಲಿಂ ಯುವಕನೋರ್ವ ತನ್ನನ್ನು ಪ್ರೀತಿಸುವಂತೆ ಪೀಡಿಸಿದ ಕಾರಣಕ್ಕೆ ಅಪ್ರಾಪ್ತೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ.ಕಲಬುರ್ಗಿಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನೆಡೆದಿದ್ದು, ಮುಸ್ಲಿಂ ಯುವಕನ (Muslim Youth) ಕಿರುಕುಳ ತಾಳಲಾರದೇ ಈ ದುರಂತ ಸಂಭವಿಸಿದೆ.

ಬಾಲಕಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆಗೆ 14 ವರ್ಷ ವಯಸ್ಸಾಗಿತ್ತು.ಕಳೆದ ಹಲವು ದಿನಗಳಿಂದ ಈಕೆಗೆ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿತ್ತು. ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದು, ಈ ಕುರಿತು ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಆಸ್ಪತ್ರೆಗೆ ಬಾಂಬ್​ ಬೆದರಿಕೆ..! ರೋಗಿಗಳನ್ನು ಹೊರಗೆ ಕಳುಹಿಸಿದ ಆಸ್ಪತ್ರೆ ಸಿಬ್ಬಂದಿ..!

ರಸ್ತೆ ಮಧ್ಯೆ ಕಾರು ನಿಲ್ಲಿಸಿ ಬ್ಯಾರಿಕೇಡ್‌ ಗೆ ಬೆಂಕಿ ಹಚ್ಚಿದ್ದೇಕೆ ಆತ..? ಬಂಧಿಸಿದ ಪೊಲೀಸರ ಮೇಲೆಯೇ ಹಲ್ಲೆ..! ಇಲ್ಲಿದೆ ವೈರಲ್ ವಿಡಿಯೋ

ಕಲ್ಲಾಪು: ಸ್ಕೂಟಿ ಚಕ್ರಕ್ಕೆ ಸಿಲುಕಿಕೊಂಡ ಸೀರೆಯ ಸೆರಗು..! ರಸ್ತೆಗೆಸೆಯಲ್ಪಟ್ಟು ಮಹಿಳೆ ದಾರುಣ ಸಾವು