ಕ್ರೈಂ

ಹರಿಹರ ಪಲ್ಲತ್ತಡ್ಕ: ಅಜ್ಜಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟಿ ಸವಾರನ ಸ್ಥಿತಿ ಚಿಂತಾಜನಕ

972

ಸುಳ್ಯ: ಹರಿಹರ ಪಲ್ಲತ್ತಡ್ಕ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೃದ್ಧೆಗೆ ಸ್ಕೂಟಿ ಗುದ್ದಿದ ಪರಿಣಾಮ ಸ್ಕೂಟಿ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಡಿಸೆಂಬರ್ 22 ರಂದು ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏನಿದು ಘಟನೆ?

ಪುಟ್ಟಮ್ಮ ಎಂಬ ವೃದ್ಧೆಯು ರಸ್ತೆ ದಾಟಿ ಹೊಳೆಗೆ ತೆರಳುತ್ತಿರುವ ಸಂದರ್ಭದಲ್ಲಿ ಕೊಲ್ಲಮೊಗ್ರು ಭಾಗದಿಂದ ಬಂದ ಜಯಪ್ರಕಾಶ್ ಎಂಬುವವರು ಚಲಾಯಿಸುತ್ತಿದ್ದ ಸ್ಕೂಟಿಯು ಅಜ್ಜಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಅಜ್ಜಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಬಲಗೈ ಹಾಗೂ ಕಾಲಿಗೆ ಪೆಟ್ಟು ಬಿದ್ದಿದೆ. ಆದರೆ ಸ್ಕೂಟಿ ಸವಾರನಿಗೆ ಹೆಚ್ಚಿನ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜಯ ಪ್ರಕಾಶ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಅವರು ಇನ್ನೂ ಚೇತರಿಸಿಕೊಂಡಿಲ್ಲ ಎನ್ನಲಾಗಿದೆ. ವೃದ್ದೆ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

See also  ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget