ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುರಾಜಕೀಯ

ಶಾಸಕ ಹರೀಶ್ ಪೂಂಜ ಮನೆಯಲ್ಲಿ ಸೇರಿದ ಬಿಜೆಪಿ ಶಾಸಕರ ದಂಡು..! ಶಾಸಕರನ್ನು ಬಂಧಿಸಿದರೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದ ಸಂಸದ ನಳಿನ್ ಕುಮಾರ್ ಕಟೀಲ್

265
Pc cr: Vartha bharati

ನ್ಯೂಸ್ ನಾಟೌಟ್: ಶಾಸಕ ಹರೀಶ್ ಪೂಂಜರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಹರೀಶ್ ಪೂಂಜ ಮನೆಯಲ್ಲಿ ಮಾತನಾಡಿದ ಸಂಸದರು ನ್ಯಾಯ ಕೇಳಿದ ಶಾಸಕರ ಮೇಲೆ ಕಾಂಗ್ರೆಸ್ ಸರ್ಕಾರದ ಒತ್ತಡದಿಂದಾಗಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

ಯಾವುದೇ ಕಾರಣಕ್ಕೂ ಶಾಸಕರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದ ಸಂಸದರು, ಶಾಸಕರನ್ನು ಬಂಧಿಸುವ ದುಸ್ಸಾಹಸಕ್ಕೆ ಪೊಲೀಸರು ಕೈಹಾಕಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ (Harish Poonja) ಬಂಧನ ಪ್ರಯತ್ನದ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲಾಗದು ಎಂದು ಶಾಸಕರ ಪರ ಮಾತನಾಡಿದ್ದಾರೆ. ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ನೋಡಿದ್ದೇನೆ, ಅವರ ಜತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿ ಅಲ್ಲ ಎಂಬುದು ಪೂಂಜಾರಿಗೂ ಕೂಡ ಗೊತ್ತಾಗಿದೆ. ಹಾಗೆಂದು ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಇಲಾಖೆ ಹೊಣೆ ಆಗಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ. ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈ ಬಿಡಬೇಕು. ಗೃಹ ಸಚಿವರು ಎಸ್​​ಪಿ ಜತೆ ಮಾತನಾಡಿ ಸೂಚನೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

Click 👇

https://newsnotout.com/2024/05/dysp-cyber-case-madikeri-bank-account
https://newsnotout.com/2024/05/bengaluru-13-year-old-sister-pregnent-by-brother
https://newsnotout.com/2024/05/harish-poonja-by-vijayendra-and-incident-in-mla-house
See also  ಸುಳ್ಯ: ಎಲೆಕ್ಟ್ರಿಷಿಯನ್ ಸತ್ಯಣ್ಣ ಇನ್ನಿಲ್ಲ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget