ಕರಾವಳಿಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

Harish poonja: ಹರೀಶ್ ಪೂಂಜಾ ಮನೆಯಲ್ಲಿ ವಕೀಲರು ಮತ್ತು ಪೊಲೀಸರ ನಡುವೆ ವಾಕ್ಸಮರ..! ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ ಹೊಣೆ ಎಂದ ಬಿ.ವೈ ವಿಜಯೇಂದ್ರ..!

278

ನ್ಯೂಸ್ ನಾಟೌಟ್: ಶಾಸಕ ಹರೀಶ್ ಪೂಂಜಾ (Harish Poonja) ಬಂಧನ ಪ್ರಯತ್ನದ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲಾಗದು ಎಂದು ಶಾಸಕರ ಪರ ಮಾತನಾಡಿದ್ದಾರೆ. ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ನೋಡಿದ್ದೇನೆ, ಅವರ ಜತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿ ಅಲ್ಲ ಎಂಬುದು ಪೂಂಜಾರಿಗೂ ಕೂಡ ಗೊತ್ತಾಗಿದೆ. ಹಾಗೆಂದು ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಇಲಾಖೆ ಹೊಣೆ ಆಗಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ. ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈ ಬಿಡಬೇಕು. ಗೃಹ ಸಚಿವರು ಎಸ್​​ಪಿ ಜತೆ ಮಾತನಾಡಿ ಸೂಚನೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಪೂಂಜಾರನ್ನು ಬಂಧಿಸಲು ಪೊಲೀಸರು ಬೆಳ್ತಂಗಡಿಯ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾಗ್ವಾದವೂ ನಡೆದಿದೆ. ಶಾಸಕರ ಮನೆಯಲ್ಲಿ ಪೊಲೀಸರು ಮತ್ತು ವಕೀಲ ನಡುವೆ ದೀರ್ಘ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ ಮಾತನಾಡಿದ ವಕೀಲ, “ಕಾನೂನು ಹೋರಾಟ ಮಾಡಲಾಗುವುದು, ಇದರಲ್ಲಿ ಸರ್ಕಾರದ ಒತ್ತಡವಿದೆ. ಹರೀಶ್ ಪೂಂಜಾ ಬೆಳವಣಿಗೆಯನ್ನು ಸಹಿಸಲಾಗದೆ ಕಾಂಗ್ರೆಸ್ ಹೀಗೆ ಮಾಡುತ್ತಿದೆ” ಎಂದು ಹೇಳಿಕೆ ನೀಡಿದ್ದಾರೆ.

Click 👇

https://newsnotout.com/2024/05/dysp-cyber-case-madikeri-bank-account
https://newsnotout.com/2024/05/bengaluru-13-year-old-sister-pregnent-by-brother
https://newsnotout.com/2024/05/lipslick-ban-in-nk-and-rules
See also  ಕಸ ಗುಡಿಸುವ ಕೆಲಸಕ್ಕೆ ಲಕ್ಷಾಂತರ ಪದವೀಧರರು ಮತ್ತು ಸ್ನಾತಕೋತ್ತರ ಪದವಿ ಪಡೆದವರಿಂದ ಅರ್ಜಿ..! ಈ ಬಗ್ಗೆ ಹೊರಗುತ್ತಿಗೆ ಪಡೆದ ಕಂಪನಿ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget