ಕರಾವಳಿಕ್ರೈಂವೈರಲ್ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ಪ್ರಕರಣ, ಸಿಡಿ ಒದಗಿಸುವಂತೆ ಹೈ ಕೋರ್ಟ್ ಸೂಚನೆ

271

ನ್ಯೂಸ್ ನಾಟೌಟ್: ಬೆಳ್ತಂಗಡಿ ಶಾಸಕರ ವಿವಾದಾತ್ಮಕ ಹೇಳಿಕೆಯ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಹೈಕೋರ್ಟ್ ಇದರ ವಿಚಾರಣೆಯನ್ನು ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹರೀಶ್ ಪೂಂಜ ಉಲ್ಲೇಖಿಸಿರುವ ಹೇಳಿಕೆಯ ಸಿಡಿ ಒದಗಿಸುವಂತೆ ಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ. ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಸಮಯಾವಕಾಶವನ್ನು ಫಿರ್ಯಾದುದಾರರ ಪರ ವಕೀಲ ಬಿ. ಲತೀಫ್ ಕೇಳಿದ್ದಾರೆ. ಡಿಸೆಂಬರ್ 8ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಮೇ 22 ರಂದು ಅಭಿನಂದನಾ ಸಮಾರಂಭವೊಂದರಲ್ಲಿ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದಿದ್ದರು. ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿತ್ತು. ಇವರ ಈ ಹೇಳಿಕೆ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಎಫ್ಐಆರ್ ಹಾಗೂ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು ಎಂದು ಶಾಸಕ ಹರೀಶ್ ಪೂಂಜಾ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

See also  ಇನ್‌ಸ್ಟಾಗ್ರಾಂನಲ್ಲಿ ಬಟ್ಟೆ ಆರ್ಡರ್ ಮಾಡಿ 80,560 ಕಳೆದುಕೊಂಡ ವ್ಯಕ್ತಿ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget