Latest

ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ಮಂಗಳೂರಿನಲ್ಲಿ ಪ್ರತ್ಯೇಕ ವಿಧಾನಸೌಧ ಎಚ್ಚರಿಕೆ!! ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆಗೆ ಸ್ಪೀಕರ್‌ ಹೇಳಿದ್ದೇನು!!

856

ನ್ಯೂಸ್‌ ನಾಟೌಟ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಪ್ರತ್ಯೇಕ ಕರಾವಳಿಯ ಕೂಗೆಬ್ಬಿಸಿದ್ದಾರೆ.ಹೀಗಾಗಿ  ಪ್ರತ್ಯೇಕ ಕರಾವಳಿಯ ಕೂಗು ದಿಢೀರ್ ಎಂದು ಕೇಳಿ ಬಂದಿದೆ.ವಿಧಾನಸಭೆ ಕಲಾಪದಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುವಾಗ ಈ ಹೇಳಿಕೆ ಪ್ರಸ್ತಾಪವಾಗಿದೆ.ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿತ್ತು.

ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ ಇರುವ ಬೀಚ್ ಟೂರಿಸಂ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯುತ್ತಾರೆ. ಕರಾವಳಿ ಜಿಲ್ಲೆಯ ಜನ ರಾಷ್ಟ್ರೀಯತೆ, ಹಿಂದುತ್ವದಲ್ಲಿ ಮುಂಚೂಣಿಯಲ್ಲಿದ್ದಾರೆ. ಕರಾವಳಿ ಜನ ಹೋಟೆಲ್ ಮ್ಯಾನೇಜ್ಮೆಂಟ್, ದೇವಸ್ಥಾನ ಮ್ಯಾನೇಜ್ಮೆಂಟ್ ಹಾಗೂ ಖಾಸಗಿ ಬಸ್ ಮ್ಯಾನೇಜ್ಮೆಂಟ್ ನಲ್ಲಿ ಪ್ರಸಿದ್ದರು. ಸರ್ಕಾರವನ್ನು ಅವಲಂಬಿಸದೇ ಸರ್ಕಾರಿ ಶಾಲೆಗಳನ್ನು ನಮ್ಮ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಿದ್ದೇವೆ. ಆದರೆ ಕರಾವಳಿ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹರೀಶ್ ಪೂಂಜಾ, ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಹರೀಶ್ ಪೂಂಜಾ ಮಾತಾಡುವಾಗ ಬೇಗ ಮುಗಿಸಿ ಎಂದರು.

See also  ಸುಳ್ಯ:ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಜಲ ಸಂರಕ್ಷಣೆ ತರಬೇತಿ ಕಾರ್ಯಕ್ರಮ;ಜಲಸಂರಕ್ಷಣೆಯ ಅಗತ್ಯತೆ, ವಿಧಗಳು, ವಿಧಾನಗಳ ಬಗ್ಗೆ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget