Uncategorized

ಯುವತಿಯ ಹೃದಯವನ್ನು ಯುವಕನಿಗೆ ಕಸಿ ಮಾಡಲು ಝೀರೊ ಟ್ರಾಫಿಕ್

ನ್ಯೂಸ್ ನಾಟೌಟ್: ಮಿದುಳು ನಿಷ್ಕ್ರಿಯವಾದ ಯುವತಿಯೊಬ್ಬರ ಹೃದಯವನ್ನು ಬೆಳಗಾವಿಯ ಯುವಕನಿಗೆ ಕಸಿ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಸಿದ್ಧತೆ ನಡೆಸಲಾಗಿದೆ. ಸೋಮವಾರ ಸಂಜೆ 4ಕ್ಕೆ ಈ ಹೃದಯವನ್ನು ಬೆಳಗಾವಿಗೆ ತರಲಾಗಿದೆ.

ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ. ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ. ಹೀಗಾಗಿ ಧಾರವಾಡ- ಬೆಳಗಾವಿ ಮಧ್ಯೆ ಝೀರೊ ಟ್ರಾಫಿಕ್ ಮೂಲಕ ಹೃದಯವನ್ನು ತರಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

Related posts

ಪಾತಾಳಕ್ಕಿಳಿದ ಟೊಮೇಟೋ ಬೆಲೆ;25 ಕೆ.ಜಿ.ಗೆ 70 ರೂಪಾಯಿ:ರೈತರ ಶ್ರಮಕ್ಕೆ ಬೆಲೆ ಇಲ್ಲವೇ

ಕದ್ದ ಚಿನ್ನಾಭರಣವನ್ನು 2 ದಿನಗಳ ಬಳಿಕ ಮನೆಯ ಜಗಲಿ ಮೇಲೆ ಇಟ್ಟುಹೋದ ಕಳ್ಳರು..! ಏನಿದು ಘಟನೆ..?

8ನೇ ತರಗತಿ ಪಾಸಾದರೆ ಸಾಕು ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ