ನ್ಯೂಸ್ ನಾಟೌಟ್: ಇಂದು(ಮೇ.18) ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ 92ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, “ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್ ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆ” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Birthday wishes to our former Prime Minister, Shri HD Deve Gowda Ji. He is widely respected for his statesmanlike approach and passion towards public service. His wisdom and insights on several issues are a source of great strength. May he be blessed with a long and healthy life.…
— Narendra Modi (@narendramodi) May 18, 2025
ಇನ್ನು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, “ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್ ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ” ಎಂದು ಶುಭ ಹಾರೈಸಿದ್ದಾರೆ.
ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು.
ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ. @H_D_Devegowda pic.twitter.com/ZEzOdkh7wm— Siddaramaiah (@siddaramaiah) May 18, 2025
ಹೆಚ್ ಡಿಡಿ ಜನ್ಮದಿನದ ಹಿನ್ನೆಲೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪದ್ಮನಾಭ ನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಎಕ್ಸ್ ನಲ್ಲಿ, ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮದುವೆಯಾದ ಒಂದೇ ವಾರಕ್ಕೆ ಪತ್ನಿಯನ್ನು ಕೊಂದ ಗಂಡ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?