ಕರಾವಳಿರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ.ಕೆ ಭೇಟಿ, ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಹೆಚ್.ಡಿ.ಕೆಯಿಂದ ಹೋಮ ಹವನ

246

ಎಚ್.ಡಿ.ಕುಮಾರಸ್ವಾಮಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿ ಭಾನುವಾರ ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪೂಜ್ಯ ಕಾವಂದರು ಕುಮಾರಸ್ವಾಮಿ ಅವರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶನಿವಾರ ಸಂಜೆ ಅವರು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು. ಧಾರ್ಮಿಕ ಹೋಮ ಹವನ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಬೆಂಗಳೂರು ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ.ಬಿ.ಸದಾಶಿವ,‌ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅಧ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಎಚ್.ಎನ್. ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

See also  ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜಾಥ  ಮತ್ತು  ಕಿರು ನಾಟಕ,ಕ್ಯಾನ್ಸರ್ ಕಾಯಿಲೆ ಬಗ್ಗೆ ಜಾಗೃತಿ ಹಾಗು ಅರಿವು ಕಾರ್ಯಕ್ರಮ
  Ad Widget   Ad Widget   Ad Widget   Ad Widget   Ad Widget   Ad Widget   Ad Widget