ಕ್ರೈಂದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಹೆದರಬೇಡಿ ಇನ್ನೊಂದು ವಾರದೊಳಗೆ ನಿಮ್ಮವರನ್ನು ಜೈಲಿಂದ ಬಿಡಿಸುವೆ ಎಂದ ಹೆಚ್.ಡಿ.ಕೆ..! ನಾಗಮಂಗಲ ಸಂತ್ರಸ್ತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಯ

203

ನ್ಯೂಸ್ ನಾಟೌಟ್: ‘ಯಾರೂ ಹೆದರಬೇಡಿ, ನಿಮ್ಮ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಾನು ಭರವಸೆ ಕೊಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸುತ್ತೇನೆ. ವಕೀಲರನ್ನು ನಾನೇ ನೇಮಿಸಿಕೊಡುತ್ತೇನೆ’ ಎಂದು ನಾಗಮಂಗಲದ ಬದರಿಕೊಪ್ಪಲು ಮಹಿಳೆಯರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದ್ದಾರೆ.

ಗಣೇಶ ವಿಸರ್ಜನೆ ಸಂದರ್ಭ ಗಲಭೆ ನಡೆದ ನಾಗಮಂಗಲದ ಬದರಿಕೊಪ್ಪಲಿಗೆ ಗುರುವಾರ(ಸೆ.20) ಸಂಜೆ ಭೇಟಿ ನೀಡಿದ ಸಚಿವರು, ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಮ್ಮವರಲ್ಲಿ ಹಲವರು ಜೈಲು ಸೇರಿದ್ದಾರೆ. ಗಂಡಸರು ಊರು ಬಿಟ್ಟಿದ್ದಾರೆ.

ಬಂಧನಕ್ಕೆ ಹೆದರಿ ಯುವಕರು ಊರನ್ನೇ ತೊರೆದಿದ್ದಾರೆ. ನಮ್ಮ ಕುಟುಂಬಕ್ಕೆ ಆಧಾರವೇ ಇಲ್ಲ. ವಯಸ್ಸಾದವರನ್ನು ಆರೈಕೆ ಮಾಡುವವರಿಲ್ಲ. ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯನ್ನು ನಾವೆಂದೂ ಎದುರಿಸಿರಲಿಲ್ಲ ಎಂದು ಸಚಿವರ ಎದುರು ಗ್ರಾಮದ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ಸಮಾಧಾನಪಡಿಸಿದ ಸಚಿವರು, ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನ ಜೈಲಿನಿಂದ ಬಿಡಿಸುತ್ತೇನೆ ಎಂದಿದ್ದಾರೆ.

Click

https://newsnotout.com/2024/09/ganeshan-chaturti-incident-similer-to-nagamangala-kannada-news/
See also  ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಬಸವರಾಜ್‌ ಬೊಮ್ಮಾಯಿ, ಖಾತೆ ಹಂಚಿಕೆ ಪಟ್ಟಿ ಇಲ್ಲಿದೆ ನೋಡಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget