Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪ್ರಸಿದ್ಧ ವಿದೇಶಿ ವೈದ್ಯರಂತೆ ನಟಿಸಿ ಹಾರ್ಟ್‌ ಆಪರೇಷನ್‌ ಮಾಡಿದ್ದ ನಕಲಿ ವೈದ್ಯ..! 7 ಜನ ಬಲಿ

422

ನ್ಯೂಸ್ ನಾಟೌಟ್: ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ನಕಲಿ ವೈದ್ಯನೊಬ್ಬ ಸುಮಾರು 7 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದು, ರೋಗಿಗಳ ಸಾವಿಗೆ ಕಾರಣನಾಗಿದ್ದಾನೆ.

ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳೊಳಗೆ 7 ಜನರ ಸಾವುಗಳ ವರದಿಯಾಗಿತ್ತು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎಂದು ತಿಳಿದು ಬಂದಿದೆ.

ಎನ್ ಜಾನ್ ಕೆಮ್ ಎಂಬ ವ್ಯಕ್ತಿ ಕ್ರಿಶ್ಚಿಯನ್ ಮಿಷನರಿ ಆಸ್ಪತ್ರೆಯಲ್ಲಿ ಬ್ರಿಟಿಷ್ ವೈದ್ಯನಂತೆ ನಟಿಸಿ ಕೆಲಸ ಮಾಡುತ್ತಿದ್ದ. ಹೆಚ್ಚಿನ ತನಿಖೆಯ ನಂತರ, ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂದು ತಿಳಿದುಬಂದಿದೆ.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ಮತ್ತು ವಕೀಲ ದೀಪಕ್ ತಿವಾರಿ, ಅಧಿಕೃತ ಸಾವಿನ ಸಂಖ್ಯೆ 7 ಆಗಿದ್ದರೂ, ನಿಜವಾದ ಸಂಖ್ಯೆ ಇನ್ನೂ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಈ ವೈದ್ಯನ ವಿರುದ್ಧ ನಾನು ಈ ಹಿಂದೆ ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.

 

See also  ಉಪ್ಪಿನಂಗಡಿ: ನಡು ರಸ್ತೆಯಲ್ಲೇ ಎರಡು ಕಾರು ಪಾರ್ಕ್ ಮಾಡಿ ಸಂತೆಗೆ ಹೋದ ಅಣ್ತಮ್ಮ..!, ಅರ್ಧಗಂಟೆ ಕಾದು..ಕಾದು ಎರಡು KSRTC ಸಿಟಿ ಬಸ್ ನಲ್ಲಿದ್ದ ಜನ ಸುಸ್ತೋ…ಸುಸ್ತು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget