ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ. ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ ದುರಂತ ಸಂಭವಿಸಿದೆ. ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.