Latest

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಹಿನ್ನೆಲೆ,ಮಂತ್ರಾಲಯದಲ್ಲಿಯೂ ಹೈ ಅಲರ್ಟ್ ;ಮಠದ ಆವರಣದಲ್ಲಿ ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ

673

ನ್ಯೂಸ್‌ ನಾಟೌಟ್:ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಹಿನ್ನೆಲೆ ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿಯೂ ಆಂಧ್ರಪ್ರದೇಶ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಪ್ರಸಿದ್ಧ ಧಾರ್ಮಿಕ ಕೇಂದ್ರ ಹಿನ್ನೆಲೆಯಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.

ಮುನ್ನೆಚ್ಚರಿಕೆ ಹಾಗೂ ಜಾಗೃತಿ ಮೂಡಿಸಲು ಪೊಲೀಸರು ಮಂತ್ರಾಲಯದಲ್ಲಿ ತೀವ್ರ ತಪಾಸಣೆ ನಡೆಸಿದದ್ದು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹಗಳು, ಮಂತ್ರಾಲಯಕ್ಕೆ ಬರುವ ಬಸ್ ಹಾಗೂ ಕಾರುಗಳಲ್ಲಿ ಶೋಧ ನಡೆಸಿದರು. ಭಕ್ತರ ಬ್ಯಾಗ್‌ಗಳನ್ನ ಕೂಡ ಈ ವೇಳೆ ತಪಾಸಣೆ ಮಾಡಲಾಯಿತು. ಮಂತ್ರಾಲಯ ಮಠಕ್ಕೆ ಸಾವಿರಾರು ಭಕ್ತರು ಬರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ಮೂಲಕ‌ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದ್ದಾರೆ. ಭದ್ರತೆ ಬಿಗಿಗೊಳಿಸಲು ಮಂತ್ರಾಲಯ ಮಠದ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಮಂತ್ರಾಲಯಂ ಹಾಗೂ ಮಾಧವರಂ ಠಾಣೆ ಪೊಲೀಸರಿಂದ ತಪಾಸಣೆ ನಡೆಯಿತು.

See also  ಕಲ್ಲುಗುಂಡಿ:ಶ್ರೀ ಮುತ್ತು ಮಾರಿಯಮ್ಮ ದೇವಿಯ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರೋತ್ಸವ;ಎ.18ರಿಂದ ಎ.20ರವರೆಗೆ ವಿವಿಧ ಕಾರ್ಯಕ್ರಮ:ಇಲ್ಲಿದೆ ಮಾಹಿತಿ
  Ad Widget   Ad Widget   Ad Widget   Ad Widget