Latestನೆಲ್ಯಾಡಿ

ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಕುಸಿದು ಬಿದ್ದ ಗುಡ್ಡ, ಅವೈಜ್ಞಾನಿಕ ಅಗೆಯುವಿಕೆ ವಿರುದ್ಧ ಜನಾಕ್ರೋಶ

336

ನ್ಯೂಸ್‌ ನಾಟೌಟ್‌: ರಾಷ್ಟ್ರೀಯ ಹೆದ್ದಾರಿ 75 ಮಣ್ಣಗುಡ್ಡ ಬಳಿ ರಸ್ತೆಗೆ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಗೆ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎಂದು ತಿಳಿದು ಬಂದಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು ಎನ್‌ಹೆಚ್‌ಎಐ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

See also  ವಿಟ್ಲ: ಈ.ಡಿ. ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ..! ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget