ಕರಾವಳಿ

ಮುಸ್ಲಿಂ ಯುವಕನೊಂದಿಗೆ ಬಸ್ ನಲ್ಲಿ ಹಿಂದೂ ಹುಡುಗಿ ಪ್ರತ್ಯಕ್ಷ

ನ್ಯೂಸ್ ನಾಟೌಟ್: ಮಂಗಳೂರಿನ ಖ್ಯಾತ ಕಾಲೇಜೊಂದರ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಯುವಕ ಬಸ್ಸಿನಲ್ಲಿ ಒಟ್ಟಿಗೆ ಪ್ರಯಾಣಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ಸಂಜೆ ಘಟನೆ ನಡೆದು ಯುವಕನಿಗೆ ಸಂಘಟನೆಯ ಕಾರ್ಯಕರ್ತರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಅವರಿಬ್ಬರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಇಂತಹ ಹಲವು ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗುತ್ತಿದೆ. ಹಿಂದೂ ಹುಡುಗಿಯರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಜಾಲತಾಣದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಂಗಳೂರು:ಪಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ,ದೂರು-ಪ್ರತಿದೂರು ದಾಖಲು

ಬೆಳ್ತಂಗಡಿ: ಯುವತಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕ! ಯುವಕರ ತಂಡದಿಂದ ಹಲ್ಲೆ!

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ,ದಿ.ಡಾ.ಕೆ.ವಿ.ಜಿ ಜನ್ಮದಿನಾಚರಣೆ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮ