ಕರಾವಳಿಕ್ರೈಂವೈರಲ್ ನ್ಯೂಸ್

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ನಡುವೆ ಮಾರಾಮಾರಿ..! ಜೈಲಿನೊಳಗಿದ್ದ ಮಾರಾಕಾಸ್ತ್ರ ವಶಕ್ಕೆ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದು, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ ಎಂದು ವರದಿ ತಿಳಿಸಿದೆ.

ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಘಟನೆಯ ಬಳಿಕ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 20ರಂದು ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ.

Related posts

‘ಛಾವ’ ಚಿತ್ರದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆಯೇ ನಂ.1 ನಟಿ ರಶ್ಮಿಕಾ ಮಂದಣ್ಣ..?! ಕಾರ್ಯಕ್ರಮವೊಂದರಲ್ಲಿ ನ್ಯಾಶನಲ್ ಕ್ರಶ್ ‘ನಿವೃತ್ತಿ’ ಬಗ್ಗೆ ಮಾತಾಡಿದ್ದೇಕೆ?

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 1,188 ಮಂದಿ ಕ್ರಿಮಿನಲ್ ಹಿನ್ನೆಲೆ ಉಳ್ಳವರು..! ಚುನಾವಣಾ ಹಕ್ಕುಗಳ ಸಂಸ್ಥೆಯ ವರದಿಯಲ್ಲೇನಿದೆ..?

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜಿನಾಮೆ, ಇಂದು ಜೆಡಿಎಸ್ ಗೆ ಸೇರ್ಪಡೆ