ಕ್ರೈಂವೈರಲ್ ನ್ಯೂಸ್

ಹಿಂದೂ ವಿದ್ಯಾರ್ಥಿನಿಯರಿಗೂ ಹಿಜಾಬ್…ವಿವಾದ; ಶಿಕ್ಷಣಾಧಿಕಾರಿ ಮೇಲೆ ಇಂಕ್ ಎರಚಿದ ಬಿಜೆಪಿ ಕಾರ್ಯಕರ್ತರು!

325

ನ್ಯೂಸ್ ನಾಟೌಟ್ :ಹಿಂದೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಾರೆಂದು ಆರೋಪಿಸಿ ಶಾಲೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿತ್ತು.ಈ ಶಾಲೆಯ ಪೋಸ್ಟರ್ ನಲ್ಲಿ ಹಿಂದೂ ಹೆಣ್ಮಕ್ಕಳು ಕೂಡ ಹಿಜಾಬ್ ಧರಿಸಿದಂತೆ ಕಾಣುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಮಾತ್ರವಲ್ಲ ವ್ಯಾಪಕ ಚರ್ಚೆಗೂ ಕಾರಣವಾಗಿತ್ತು.
ಇದೀಗ ಬಿಜೆಪಿ ಕಾರ್ಯಕರ್ತರು ಮತ್ತೆ ತೀವ್ರ ಆಕ್ರೋಶಕ್ಕೊಳಗಾಗಿದ್ದಾರೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಗಂಗಾ ಜಮ್ನಾ ಹೈಯರಿ ಸೆಕೆಂಡರಿ ಸ್ಕೂಲ್ ನಲ್ಲಿ ಬ್ಯಾನರ್ ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ್ದರು.ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿ ಜಿಲ್ಲಾ ಶಿಕ್ಷಣಾಧಿಕಾರಿ ಮೇಲೆ ಇಂಕ್ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನುವ ಸುದ್ದಿ ಹರಿದಾಡುತ್ತಿದೆ.
ಹಿಂದೂ ಮತ್ತು ಜೈನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಶಾಲೆಯಲ್ಲಿ ಓದುತ್ತಿದ್ದು, ಹಿಂದೂ ಹುಡುಗಿಯರಿಗೆ ಹಿಜಾಬ್ ಧರಿಸಿದ ಬ್ಯಾನರ್ ಹಾಕಿದ್ದೇ ಈ ರಾದ್ಧಾಂತಕ್ಕೆ ಕಾರಣವಾಗಿದೆ. ಹಿಂದೂ ಹೋರಾಟಗಾರರು ಖಾಸಗಿ ಶಾಲೆಯ ವಿರುದ್ದ ಕ್ರಮಕೈಗೊಳ್ಳಲು ಆಗ್ರಹಿಸಿದ್ದರು.

See also  ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್‌..! ಅನರ್ಹ ಪ್ರಶ್ನಿಸಿ ಕ್ರೀಡಾ ನ್ಯಾಯ ಮಂಡಳಿಗೆ ಮೇಲ್ಮನವಿ ಸಲ್ಲಿಸಿದ ಫೋಗಟ್‌..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget