ಕರಾವಳಿಪುತ್ತೂರು

ಉಳ್ಳಾಲ ನೈತಿಕ ಪೊಲೀಸ್‌ ಗಿರಿ ಪ್ರಕರಣ: ಉಳ್ಳಾಲ ಠಾಣೆಗೆ ಅರುಣ್ ಪುತ್ತಿಲ ಭೇಟಿ

251

ನ್ಯೂಸ್‌ ನಾಟೌಟ್‌ : ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಪುತ್ತಿಲ, ಘಟನೆ ಬಗ್ಗೆ ಪಾರದರ್ಶಕ ತನಿಖೆ ನಡೆಯಬೇಕೆಂಬುದು ನಮ್ಮೆಲ್ಲರ ಆಗ್ರಗ. ಘಟನೆಯಲ್ಲಿದ್ದಂತಹ ಮೂವರು ವಿದ್ಯಾರ್ಥಿಗಳ ಪೋಷಕರನ್ನು ಕರೆದು ವಾಸ್ತವಿಕ ವಿಚಾರ ಏನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ವಹಿಸಿಕೊಳ್ಳಬೇಕು . ಅಲ್ಲದೇ ಆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಹಾಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದರು.

See also  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget