ಕರಾವಳಿಪುತ್ತೂರು

ಕೊಡಗು ಚುನಾವಣಾ ಉಸ್ತುವಾರಿಯಾಗಿ ಹೆಚ್.ಎಂ.ನಂದಕುಮಾರ್ ನೇಮಕ

308

ನ್ಯೂಸ್ ನಾಟೌಟ್ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಹಾಗೂ ಟಿಕೇಟ್ ಕೈ ತಪ್ಪಿದ ಹಿನ್ನಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧರಾಗಿದ್ದ ಕೆಪಿಸಿಸಿ ಸಂಯೋಜಕ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಹೊಸ ಜವಾಬ್ದಾರಿ ನೀಡಿದೆ.

ಹೌದು,ಇದೀಗ ಅವರಿಗೆ ಕೆಪಿಸಿಸಿ ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಜವಾಬ್ದಾರಿ ನೀಡಿದೆ. ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಘಟಕಗಳಾದ ಎನ್‌ಎಸ್‌ಯುಐ, ಯುವ ಕಾಂಗ್ರೆಸ್, ಮಹಿಳಾ ಘಟಕಗಳನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ತೊಡಗಿಸುವ ಜವಾಬ್ದಾರಿಯನ್ನು ನಂದಕುಮಾರ್ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ.

ನಿನ್ನೆಯಷ್ಟೇ ನಂದ ಕುಮಾರ್ ಅವರು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು ಮತ್ತು ನಂದಕುಮಾರ್ ಬಣ  ಚುನಾವಣಾ ಕಣದಲ್ಲಿ‌ ತಟಸ್ಥರಾಗಿ ಇರಲು ನಿರ್ಧರಿಸಿದೆ ಎಂದು ಹೇಳಲಾಗಿತ್ತು. ಪಕ್ಷೇತರರಾಗಿ ಸ್ಪರ್ಧೆ ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಮಾತಿಗೆ ಬೆಲೆ ಕೊಟ್ಟು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಂದಕುಮಾರ್ ಅವರು ಸ್ಪಷ್ಟಪಡಿಸಿದ್ದರು.ಇದೀಗ ಇದೀಗ ಕೆಪಿಸಿಸಿ ವತಿಯಿಂದ ಕೊಡಗು ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಳಿಸಿದ್ದು ಮತ್ತೆ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಪಕ್ಷದ ವರಿಷ್ಠರಿಂದ ಆದೇಶ ಬಂದಿದೆ ಎನ್ನಲಾಗಿದೆ.

See also  ಹೊಸ ಬಾವಿಗೆ ರಿಂಗ್ ಹಾಕುತ್ತಿದ್ದಾಗ ನಡೆಯಿತು ದುರಂತ..!,50 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು, ಅಗ್ನಿಶಾಮಕ ಸಿಬ್ಬಂದಿ ರೋಚಕ ಕಾರ್ಯಾಚರಣೆ, ವಿಡಿಯೋ ವೀಕ್ಷಿಸಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget