ಕ್ರೈಂರಾಜಕೀಯ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ಬಂಧಿಸಲಾಗುವುದು ಎಂದ ಗೃಹಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

294

ನ್ಯೂಸ್ ನಾಟೌಟ್: ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಬಂಧಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ(ಮಾರ್ಚ್ 5) ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯು ಏರ್ಪಡಿಸಿದ್ದ 5ನೆ ರಾಜ್ಯ ಮಟ್ಟದ ಜಾಗೃತ ಸಮಾವೇಶ ಉದ್ಘಾಟಿಸಿ ಮಾತನಾಡಿ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರ ಮತ್ತು ನೀಡುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸುವ ಅಧಿಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸಿಗಲಿದೆ.

ಇದರಿಂದ ನಕಲಿ ಜಾತಿ ಪ್ರಮಾಣಪತ್ರ ಹಾವಳಿಗೆ ಕಡಿವಾಣ ಬೀಳಲಿದೆ ಎಂದರು. ಜಾತಿಗಣತಿ ವರದಿಯಲ್ಲಿ ಯಾವ ಜಾತಿಯ ಜನಸಂಖ್ಯೆ ಹೆಚ್ಚಿದ್ದಾರೆ, ಯಾವ ಜಾತಿ ಜನ ಕಡಿಮೆ ಇದ್ದಾರೆ ಎಂಬುದು ಅನಧಿಕೃತವಾಗಿ ಗೊತ್ತಾದ ತಕ್ಷಣ ಅಸಹನೆಯ ಮಾತು ಕೇಳಿ ಬರುತ್ತಿವೆ. ಜಾತಿಗಣತಿ ವರದಿಗೆ ತೀವ್ರ ವಿರೋಧವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಸ್ವೀಕರಿಸಿದ್ದಾರೆ.

ಈ ವರದಿಯನ್ನು ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸದನದಲ್ಲಿ ಮಂಡಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಎಸ್ಸಿ, ಎಸ್ಟಿ ಸಮುದಾಯದ ಜನ ಒಟ್ಟಾಗಿ ಕೆಲಸ ಮಾಡಿದರೆ 125 ವಿಧಾನಸಭಾ ಕ್ಷೇತ್ರಗಳಲ್ಲಿಯೂ ನಿರ್ಣಾಯಕ ತೀರ್ಮಾನಗಳನ್ನು ತೆಗೆದುಕೊಳ್ಳಹುದು ಎಂದು ಮಾಹಿತಿ ನೀಡಿದ್ದಾರೆ.

See also  ಬೆಂಗಳೂರಿನಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದ ಯುವಕ ಅರೆಸ್ಟ್..! ವಿಚಾರಣೆ ವೇಳೆ ಯುವಕರು ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget