ಕ್ರೈಂ

ಬಿಡುಗಡೆಯಾಗಲಿದೆ ಮತ್ತೋರ್ವ ಶಾಸಕನ ಸೆಕ್ಸ್ ಸಿಡಿ? ಏನಿದು ವೈರಲ್ ವಿಚಾರ?

747

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡತೊಡಗಿದೆ. ‘ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಪೋಸ್ಟ್ ಹರಿದಾಡತೊಡಗಿದೆ. ಈ ಸಂಬಂಧ ಯತ್ನಾಳ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ವಿಜಯಪುರದ ಸೈಬರ್ ( ಸಿಇಎನ್) ಕ್ರೈಂ ಪೊಲೀಸ್ ಠಾಣೆಗೆ ಬುಧವಾರ ಸಂಜೆ ದೂರು ನೀಡಿದ್ದಾರೆ. ‘ ಕಾಂಗ್ರೆಸ್’ ಇನ್ ಸ್ಟಾ ಗ್ರಾಮ್ ಖಾತೆಯ ಪ್ರೊಪೈಲ್ ನಲ್ಲಿ ಶಾಸಕ ಯತ್ನಾಳ ಅವರ ಭಾವಚಿತ್ರ ಹಾಗೂ ಅಶ್ಲೀಲ ಬರಹ ಹರಿದಾಡುತ್ತಿದೆ. ಈ ಮೂಲಕ ಶಾಸಕರಿಗೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

See also  ಇಂದು(ಡಿ.16) ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರಲಿರುವ ಪವಿತ್ರಗೌಡ, ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಯ ಬಾಂಡ್, ಇಬ್ಬರ ಭದ್ರತೆ ಮತ್ತು ಷರತ್ತುಗಳೊಂದಿಗೆ ಬಿಡುಗಡೆ
  Ad Widget   Ad Widget   Ad Widget   Ad Widget   Ad Widget