Latestಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಸಚಿವರ ಹನಿಟ್ರ್ಯಾಪ್‌ ಕೇಸ್ ಗೆ ಹೊಸ ಟ್ವಿಸ್ಟ್..! ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದು ಡಿಜಿಪಿಗೆ ದೂರು ಕೊಟ್ಟ ರಾಜಣ್ಣ ಪುತ್ರ..!

637

ನ್ಯೂಸ್ ನಾಟೌಟ್ : ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿಲ್ಲ. ಬದಲಾಗಿ, ಕೊಲೆ ಮಾಡಲು ಸುಪಾರಿ ನೀಡಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ಪುತ್ರ, ವಿಧಾನಪರಿಷತ್ ಸದಸ್ಯ ರಾಜೇಂದ್ರ ಗುರುವಾರ(ಮಾ.27) ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ತೆರಳಿ ದೂರು ನೀಡಿದ ರಾಜೇಂದ್ರ, ನಾನು ಹನಿಟ್ರ್ಯಾಪ್​ ಯತ್ನದ ಬಗ್ಗೆ ದೂರು ಕೊಡಲು ಬಂದಿಲ್ಲ. ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ. ಆ ಬಗ್ಗೆ ದೂರು ನೀಡಿದ್ದೇನೆ ಎಂದರು.

ಕಳೆದ ಒಂದು ವಾರ ಅಥವಾ ಹತ್ತು ದಿನದಿಂದ ಕೊಲೆ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ನಾನು ಡಿಜಿಪಿ ಅವರನ್ನು ಭೇಟಿ ಮಾಡಿದ್ದೇನೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ತನಿಖೆ ಆಗಬೇಕು ಅಂತ ಗೃಹ ಸಚಿವರಿಗೆ ಮನವಿ ಮಾಡಿದ್ದೆ. ಈಗ ಡಿಜಿಪಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ ಎಂದರು.

ನನ್ನ ಮೇಲೆ ಯಾವುದೇ ಹನಿಟ್ರ್ಯಾಪ್ ಯತ್ನ ನಡೆದಿಲ್ಲ. ಆದರೆ ಫೋನ್ ಕಾಲ್ ಗಳು ಬರ್ತಾ ಇದ್ದವು. ಕಳೆದ ನವೆಂಬರ್ 16 ರಂದು ಮಗಳ ಹುಟ್ಟುಹಬ್ಬ ಇತ್ತು. ಅವತ್ತು ಮನೆಗೆ ಶಾಮೀಯಾನ ಹಾಕಲು ಬಂದವರು ನನ್ನ ಮೇಲೆ ದಾಳಿ ಮಾಡುವ ಉದ್ದೇಶದಿಂದ ಬಂದಿದ್ದರು ಎಂದು ಆರೋಪಿಸಿದರು.

ಅಂದು ಅವರು ಕೊಲೆ ಮಾಡಬೇಕು ಅಂತ ನಮ್ಮ ಮನೆಗೆ ಬಂದಿದ್ದರು. ಈ ವಿಚಾರ ನನಗೆ ಜನವರಿಯಲ್ಲಿ ಗೊತ್ತಾಗಿದೆ. ಒಂದು ವಾಯ್ಸ್ ರೆಕಾರ್ಡ್ ಬಂದಿತ್ತು. ನನ್ನ ಮೂಲಗಳ ಮೂಲಕ ಕೊಲೆಗೆ ಸುಪಾರಿ ಕೊಟ್ಟ ವಿಚಾರ ಬಯಲಾಯ್ತು. ಆ ವಾಯ್ಸ್ ನಲ್ಲಿ 5 ಲಕ್ಷ ಹಣ ನೀಡಿರುವ ಬಗ್ಗೆ ಮಾತಾಡಿದ್ದಾರೆ. ನನ್ನ ಕೊಲೆಗೆ ಸುಫಾರಿ ಕೊಟ್ಟಿದ್ದಾರೆ ಎಂದು ರಾಜೇಂದ್ರ ಆರೋಪಿಸಿದ್ದಾರೆ.

ಇದನ್ನೂ ಓದಿಪ್ರತಿ ಯೂನಿಟ್‌ ವಿದ್ಯುತ್ ಗೆ 36 ಪೈಸೆ ಹೆಚ್ಚಳ..! ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌..!

ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆಯ ಶಾಕ್..! ಪ್ರತಿ ಲೀಟರ್ ಹಾಲಿಗೆ 4 ರೂ. ಹೆಚ್ಚಳ ಮಾಡಲು ಸರ್ಕಾರದ ಒಪ್ಪಿಗೆ..!

See also  10 ವರ್ಷ ಮೇಲ್ಪಟ್ಟ ಅಪ್ರಾಪ್ತರಿಗೆ ಸ್ವತಂತ್ರವಾಗಿ ಬ್ಯಾಂಕ್ ಖಾತೆ ಹೊಂದಲು ಒಪ್ಪಿಗೆ ನೀಡಿದ ಆರ್‌.ಬಿ.ಐ..! ಡೆಬಿಟ್ ಕಾರ್ಡ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್‌ ಗೂ ಅವಕಾಶ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget