ನ್ಯೂಸ್ ನಾಟೌಟ್: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಾಜಣ್ಣ ಇಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ದೂರು ನೀಡದೇ ಮನವಿ ಮಾತ್ರ ನೀಡಿದ್ದಾರೆ.
ಇಂದು(ಮಾ.25) ಸಂಜೆ ಪರಮೇಶ್ವರ್ ನಿವಾಸಕ್ಕೆ ತೆರಳಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಮನವಿ ಸ್ವೀಕರಿಸಿದ ಬಳಿಕ ಪರಮೇಶ್ವರ್ ಮಾತನಾಡಿ, ರಾಜಣ್ಣ ಇಂದು ಮನವಿ ನೀಡಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ನೀಡಿರೋ ಪ್ರತಿಯಲ್ಲಿ ಏನೆಲ್ಲ ಅಂಶಗಳಿದೆ ಅನ್ನೋದನ್ನ ಚರ್ಚೆ ಮಾಡಲು ಆಗುವುದಿಲ್ಲ. ಮನವಿ ಆಧಾರದ ಮೇಲೆ ಏನ್ ಮಾಡಬೇಕು, ಯಾರಿಗೆ ಅದನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರೆಡ್ ಸಿಗ್ನಲ್ ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್ ಗೆ ಟ್ರಾಫಿಕ್ ಕ್ಲಿಯರ್ ಮಾಡಿ ಹೀರೋ ಆದ ಯ್ಯೂಟ್ಯೂಬರ್..! ವಿಡಿಯೋ ವೈರಲ್