ಕ್ರೈಂ

ವ್ಯಕ್ತಿಯನ್ನು ತೋಟದಲ್ಲಿ ತಿವಿದು ಕೊಂದ ಹೋರಿ..!

839

ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ.

ಏನಿದು ಘಟನೆ?

ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು ತೆರಳಿದ್ದರೆನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದು ಹತ್ತಿರ ಹೋಗಿ ನೋಡುವಾಗ ಅವರು ಮೃತಪಟ್ಟಿರುವುದು ತಿಳಿದು ಬಂತು. ಬಳಿಕ ಮನೆಯವರಿಗೆ ವಿಷಯ ತಿಳಿಸಲಾಯಿತು. ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಮೃತ ಶರೀರವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿ ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರು ಅವಿವಾಹಿತರಾಗಿದ್ದು ಸಹೋದರರು, ಸಹೋದರಿಯರು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

See also  ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ..! ಕರ್ನಾಟಕದ ಉದ್ಯಮಿ ಸೇರಿ ಐವರು ಸಾವು..!
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget