ಕರಾವಳಿಪುತ್ತೂರು

ಶಿರಾಡಿ ಬಳಿ ಭೀಕರ ರಸ್ತೆ ಅಪಘಾತ, ರಾಜಹಂಸ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ,ಪ್ರಯಾಣಿಕನ ಕೈಗೆ ಗಂಭೀರ ಗಾಯ

316

ನ್ಯೂಸ್ ನಾಟೌಟ್ : ಶಿರಾಡಿ ಬಳಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ನಡೆದಿದೆ.

ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಉಡುಪಿಯಿಂದ ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ರಾಜಹಂಸ ಬಸ್ಸ ಹಾಗೂ ಶಿವಮೊಗ್ಗದಿಂದ ಮಂಗಳೂರಿಗೆ ಬರುವ ಖಾಲಿ ಗ್ಯಾಸ್ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಹಾಗೂ ಸಿಬ್ಬಂದಿ ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದರು.

See also  ಸೌಜನ್ಯ ಕೇಸ್: ಉಜಿರೆಯಲ್ಲಿ ಧರ್ಮಸ್ಥಳದ ಪರವಾಗಿ ಭಕ್ತ ವೃಂದದ ಪ್ರತಿಭಟನಾ ಸಮಾವೇಶ,ಸಾವಿನ ವಿಚಾರ ಮುಂದಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರಕ್ಕೆ ಅಪಮಾನ ಮಾಡುವ ಹುನ್ನಾರ-ಡಾ.ಎಲ್.ಎಚ್. ಮಂಜುನಾಥ್
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget