ಕ್ರೈಂಚಿಕ್ಕಮಗಳೂರುವೈರಲ್ ನ್ಯೂಸ್

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ನಿಗೂಢ ಸಾವು! 8ನೇ ತರಗತಿ ವಿದ್ಯಾರ್ಥಿನಿಗೆ ಅಂತದ್ದೇನಾಯ್ತು?

ನ್ಯೂಸ್ ನಾಟೌಟ್ : ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿಯಲ್ಲಿ ವರದಿಯಾಗಿದೆ.

ವಸತಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಉಷಾ(14) ಶನಿವಾರ ಮುಂಜಾನೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ.

ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು ಆಕೆಯನ್ನು ಆಂಬ್ಯುಲೆನ್ಸ್ ಮೂಲಕ ಅಜ್ಜಂಪುರ ಪ್ರಾಥಮಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ದಾರಿ ಮಧ್ಯೆ ವಿದ್ಯಾರ್ಥಿನಿ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ವಿದ್ಯಾರ್ಥಿನಿ ಕಳೆದ ಹಲವು ವರ್ಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆಟೋ ರಿಕ್ಷಾ, ಓಮ್ನಿ ಕಾರು ನಡುವೆ ಅಪಘಾತ; ಓರ್ವ ಗಂಭೀರ

ಖಡಕ್ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಜೀವನಾಧಾರಿದ ಚಿತ್ರ ಶೀಘ್ರದಲ್ಲಿ ತೆರೆಗೆ..? ಕರ್ನಾಟಕದ ಸಿಂಗಂ ಪಾತ್ರದಲ್ಲಿ ನಟ ವಿಶಾಲ್

ಈಜಲು ಹೋದ ವಿದ್ಯಾರ್ಥಿಗಳು ಸಮುದ್ರ ಪಾಲು