ಕ್ರೈಂವೈರಲ್ ನ್ಯೂಸ್

ಹಾಸ್ಟೆಲ್‌ನಲ್ಲಿ ನಮಾಜ್‌ ಮಾಡುತ್ತಿದ್ದ ವಿದ್ಯಾರ್ಥಿಗಳ ದಿಢೀರ್ ದಾಳಿ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?

268

ನ್ಯೂಸ್ ನಾಟೌಟ್: ಕಳೆದ ಮಾ.16 ರಂದು ರಾತ್ರಿ ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ಗೆ ನುಗ್ಗಿದ ಗುಂಪೊಂದು, ನಮಾಜ್ ಮಾಡಿದ ಆರೋಪದ ಮೇಲೆ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಒಬ್ಬರು ಮತ್ತು ಆಫ್ರಿಕನ್ ದೇಶಗಳ ಇಬ್ಬರ ಮೇಲೆ ಹಲ್ಲೆ ನಡೆದಿದೆ. ಪೊಲೀಸರು ಬರುವಷ್ಟರಲ್ಲಿ ಗುಂಪು ಓಡಿಹೋಗಿತ್ತು. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಉಳಿದ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಹಾನಿಗೊಳಗಾದ ಬೈಕ್‌ಗಳು, ಒಡೆದ ಲ್ಯಾಪ್‌ಟಾಪ್‌ಗಳು ಮತ್ತು ಧ್ವಂಸಗೊಂಡ ಕೊಠಡಿಗಳ ದೃಶ್ಯಗಳಿರುವ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಗುಂಪು ಹಾಸ್ಟೆಲ್‌ಗೆ ಕಲ್ಲು ಎಸೆಯುತ್ತಿರುವುದು ಮತ್ತು ವಿದೇಶಿ ವಿದ್ಯಾರ್ಥಿಗಳನ್ನು ನಿಂದಿಸುತ್ತಿರುವ ದೃಶ್ಯದ ವೀಡಿಯೋ ಕೂಡ ವೈರಲ್‌ ಆಗಿದೆ ಎಂದು ವರದಿ ತಿಳಿಸಿದೆ. ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಹಮದಾಬಾದ್ ಮೂಲದ ಕ್ಯಾಂಪಸ್‌ನಲ್ಲಿ ಯಾವುದೇ ಮಸೀದಿ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದ್ದರಿಂದ ರಂಜಾನ್ ಸಮಯದಲ್ಲಿ ರಾತ್ರಿ ನೀಡಲಾಗುವ ತರಾವೀಹ್ – ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಜಮಾಯಿಸಿದ್ದರು. ಸ್ವಲ್ಪ ಸಮಯದ ನಂತರ ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಮಾರಕಾಸ್ತ್ರಗಳೊಂದಿಗೆ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದೆ. ಅವರ ಕೊಠಡಿಗಳನ್ನು ಧ್ವಂಸಗೊಳಿಸಿದೆ. ಹಾಸ್ಟೆಲ್‌ನ ಸೆಕ್ಯುರಿಟಿ ಗಾರ್ಡ್ ಗುಂಪನ್ನು ತಡೆಯಲು ಪ್ರಯತ್ನಿಸಿ ವಿಫಲರಾದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

See also  ಹಳೆನೇರಂಕಿ: ಅಕ್ರಮ ಕೋಳಿ ಅಂಕದಲ್ಲಿ ತೊಡಗಿದ್ದ ಮೂವರು ಅರೆಸ್ಟ್..! 6 ಬೈಕ್, 2 ಕಾರು, 4 ಕೋಳಿ ಪೊಲೀಸ್ ವಶಕ್ಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget