Latestಕ್ರೈಂವೈರಲ್ ನ್ಯೂಸ್

ಆಕೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ ಗೆ ನುಗ್ಗಿದ ಯುವಕ..! ಆತನನ್ನು ವಶಕ್ಕೆ ಪಡೆದ ಪೊಲೀಸರು..!

777

ನ್ಯೂಸ್ ನಾಟೌಟ್: ಯುವಕನೋರ್ವ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ ಗೆ ನುಗ್ಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ನಡೆದಿದೆ.

ಜ್ಞಾನಭಾರತಿ ಕಾಲೇಜಿನ ರಮಾಬಾಯಿ ಹಾಸ್ಟೆಲ್‌ ಗೆ ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕನನ್ನ ಮಾಲೂರು ಮೂಲದವನು ಎನ್ನಲಾಗಿದೆ. ಯುವಕನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದರು.

ವಿದ್ಯಾರ್ಥಿನಿಯರಿರುವ ಹಾಸ್ಟೆಲ್‌ ಗೆ ನುಗ್ಗಿರುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಹಾಸ್ಟೆಲ್‌ ಗೆ ನುಗ್ಗಿದ್ದ ಯುವಕನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆಕೆಯೇ ಹಾಸ್ಟೆಲ್‌ ನಲ್ಲಿ ವ್ಯವಸ್ಥೆ ಮಾಡಿರುವುದು ತಿಳಿದುಬಂದಿದೆ.

ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್‌ ಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ವಿರಾಟ್‌ ಕೊಹ್ಲಿ ತಿನ್ನುವ ಊಟದ ಅಕ್ಕಿಗೆ ಕೆಜಿಗೆ 500ರೂ..! ಇದು ತಯಾರಾಗುವುದಾದ್ರೂ ಹೇಗೆ..?
  Ad Widget   Ad Widget     Ad Widget   Ad Widget   Ad Widget   Ad Widget