ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆ ಹರಿದ ಕಾರು..! ಇಲ್ಲಿದೆ ಭೀಕರ ಅಪಘಾತದ ದೃಶ್ಯ..!

ನ್ಯೂಸ್ ನಾಟೌಟ್: ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಇಂದೋರ್‌ ನ ಜೈಭವಾನಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದಾನೆ.
ಈ ವೇಳೆ ಕಾರು ನಿಯಂತ್ರಣ ತಪ್ಪಿದ್ದು, ನೋಡ ನೋಡುತ್ತಲೇ ರಸ್ತೆ ಪಕ್ಕ ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಢಿಕ್ಕಿಯಾಗಿದೆ. ಈ ಅಪಘಾತದಲ್ಲಿ 19 ವರ್ಷದ ಯುವತಿ ಹಾಗೂ 13 ವರ್ಷದ ಅಪ್ರಾಪ್ತ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕಾರಿನಡಿ ಸಿಲುಕಿದ್ದ ಇಬ್ಬರು ಬಾಲಕಿಯರನ್ನು ಸ್ಥಳೀಯರು ಹೊರಗೆಳೆದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಮಾಲೀಕನ ಹೆಸರು ತುಷಾರ್ ಅಗರ್ವಾಲ್ ಎಂದು ಆತ ಹುಕುಂಚಂದ್ ಎಂಬ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದ. ಆದರೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.

Related posts

ಭಾರತದ ಹೃದಯ ಪಾಕ್ ಯುವತಿಗೆ..! 19 ರ ಆಯೇಶಾಳಿಗೆ ಮಿಡಿದ ಭಾರತೀಯ ವೈದ್ಯರ ಹೃದಯ, ಭಾವುಕರಾದ ತಾಯಿ

ಕಾಸರಗೋಡು : ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದೇಕೆ ಆ ಗುಂಪು? ಜಿಲ್ಲಾ ಪಂಚಾಯತ್ ಸದಸ್ಯನ ಬಂಧನ

ಪುತ್ತೂರು: ನವವಿವಾಹಿತೆ ಹೃದಯಾಘಾತಕ್ಕೆ ಬಲಿ!