Latestಕ್ರೈಂಬೆಂಗಳೂರುಬೆಂಗಳೂರುವೈರಲ್ ನ್ಯೂಸ್

ಪತ್ನಿಯನ್ನು ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ..! ಇಲ್ಲಿದೆ ಸಿನಿಮೀಯ ಘಟನೆ..!

991
Pc Cr: Public Tv

ನ್ಯೂಸ್ ನಾಟೌಟ್: ಪ್ರಿಯಕರನೊಂದಿಗೆ ಚಕ್ಕಂದವಾಡುತ್ತಾ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯನ್ನ ಕೊಂದು, ಆಕೆಯ ರುಂಡದೊಂದಿಗೆ ಪತಿ ಪೊಲೀಸ್‌ ಠಾಣೆಗೆ ತೆರೆಳಿ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೀಲಲಿಗೆ ಎಂಬಲ್ಲಿ ನಡೆದಿದೆ.

ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆನ್ನಾಗರ ಸಮೀಪದ ಕಾಚನಾಯಕನಹಳ್ಳಿ ನಿವಾಸಿ ಶಂಕರ್(28) ಪತ್ನಿಯ ರುಂಡ ಕಡಿದ ಆರೋಪಿ ಎಂದು ಗುರುತಿಸಲಾಗಿದೆ. ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ. ಪತ್ನಿ ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ‌ ಪತಿ ಆಕೆಯ ರುಂಡ ಕಡಿದು ಸೂರ್ಯನಗರ ಠಾಣೆಗೆ ಕೊಂಡೊಯ್ದಿದ್ದಾನೆ. ಬಳಿಕ ಪೊಲೀಸರು ಆತನನ್ನ ಬಂಧಿಸಿದ್ದಾರೆ.

ಮಾನಸ ಮತ್ತು ಶಂಕರ್‌ ಪ್ರೀತಿಸಿ ಮದುವೆಯಾಗಿದ್ದರು. ತಿಂಗಳ ಹಿಂದಷ್ಟೇ ಹೀಲಲಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್‌ ಆಗಿದ್ದರು. ಇದೇ ತಿಂಗಳ 3ನೇ ತಾರೀಖು ಶಂಕರ್‌ ಕೆಲಸದ ನಿಮಿತ್ತ ತೆರಳಿದ್ದ, ಹೊರಡುವಾಗ ಮಾರನೆ ದಿನ ಬರುವುದಾಗಿ ಹೇಳಿದ್ದ. ಆದರೆ ಕೆಲಸ ಬೇಗ ಮುಗಿದ ಹಿನ್ನೆಲೆ ಪತ್ನಿ ಒಬ್ಬಳೆ ಇರುತ್ತಾಳೆಂದು ತಡರಾತ್ರಿಯೇ ವಾಪಸ್‌ ಆಗಿದ್ದ. ಗಂಡನ ಚಿಂತೆಯೇ ಇಲ್ಲದೇ ಪತ್ನಿ ಪ್ರಿಯಕರನೊಂದಿಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ.

ಇದರಿಂದ ಆಕ್ರೋಶಗೊಂಡ ಪತಿ ಶಂಕರ್‌ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ. ನೀನು ನನಗೆ ಬೇಡ ಅಂತ ಪ್ರಿಯಕರನ ಜೊತೆಗೇ ಕಳಿಸಿದ್ದಾನೆ. ಆದರೆ, ಪತ್ನಿ ಮಾನಸ ಮಾತ್ರ ಪದೇ ಪದೇ ಆತನಿಗೆ ಟಾರ್ಚರ್‌ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಳಂತೆ. ಇದರಿಂದ ಬೇಸತ್ತ ಪತಿ ಆಕೆಯ ತಲೆ ಕಡಿದು ಠಾಣೆಗೆ ಸೂರ್ಯನಗರ ಪೊಲೀಸ್‌ ಠಾಣೆಗೆ ತೆಗದುಕೊಂಡು ಬಂದಿದ್ದಾನೆ. ನಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಸ್ತೆ ರಿಪೇರಿ ಮಾಡುತ್ತಿದ್ದಾಗ ಪುರಾತನ ಮಣ್ಣಿನ ಕಲಶ ಪತ್ತೆ..! ಅದರೊಳಗಿತ್ತು ರಾಜವಂಶದ 60 ಚಿನ್ನದ ನಾಣ್ಯಗಳು..!

ಭಾರತ-ಪಾಕ್ ಕದನ ವಿರಾಮ ಡೊನಾಲ್ಡ್ ಟ್ರಂಪ್ ನಿಂದ ಆದದ್ದು ಎಂದ ರಷ್ಯಾ..! ಟ್ರಂಪ್ ಹೇಳಿಕೆಗೆ ರಷ್ಯಾದಿಂದ ಅನುಮೋದನೆ..!

See also  ಕಸದ ತೊಟ್ಟಿಯಲ್ಲಿ ಸಿಕ್ಕಿದ ಹೆಣ್ಣು ಕೂಸಿಗೆ ಒಲಿದ ಅದೃಷ್ಟ ದೇವತೆ!ಭಾರತದ ಕುವರಿ ಇಂದು ಅಂತರರಾಷ್ಟ್ರೀಯ ಕ್ರಿಕೆಟ್​ ತಂಡದ ಅಧ್ಯಕ್ಷೆ!!ಈಕೆಯ ರೋಚಕ ಕಥೆಯನ್ನು ನೀವೂ ಓದಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget