Latestಕ್ರೈಂರಾಜ್ಯ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ 25ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಪತಿ..! ಭೀಕರ ಘಟನೆಗೆ ಸಾಕ್ಷಿಯಾದ ಬಾಡಿಗೆ ಮನೆ

803

ನ್ಯೂಸ್‌ ನಾಟೌಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನೊಬ್ಬ ವೈವಾಹಿಕ ಕಲಹದಿಂದಾಗಿ ಹೆಂಡತಿಯನ್ನು 25ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳಿ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ಮಂಡ್ಯ ಮೂಲದ ಗೀತಾ (22) ಎಂದು ಗುರುತಿಸಲಾಗಿದೆ. ಕೃತ್ಯವೆಸಗಿದ ಆರೋಪಿ ಪತಿ ನವೀನ್ (25) ಪರಾರಿಯಾಗಿದ್ದಾನೆ.

ಕೊರಟಗೆರೆ ತಾಲೂಕಿನ ಅಮೃತಗಿರಿ ಗ್ರಾಮದ ನವೀನ್ ಹಾಗೂ ಮಂಡ್ಯ ಜಿಲ್ಲೆ ಗಣನೂರಿನ ಗೀತಾ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆಗೆ ವಾಸವಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಗಂಡು ಮಗು ಕೂಡ ಇದೆ. ಗೀತಾ ಈಚೆಗೆ ಮಗುವನ್ನು ತವರು ಮನೆಗೆ ಕಳುಹಿಸಿದ್ದರು.

ಮದುವೆಯಾದ ನಂತರ ಪತಿಯ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ವೈವಾಹಿಕ ಕಲಹಗಳ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಪದೇ ಪದೆ ಜಗಳ ನಡೆಯುತ್ತಿದ್ದುದಾಗಿ ನೆರೆಹೊರೆಯವರು ಹೇಳುತ್ತಿದ್ದಾರೆ. ಕೆಲವೊಮ್ಮೆ ಮನೆಯ ಮಾಲೀಕರೇ ಜಗಳ ಬಿಡಿಸುವಂತ ಸ್ಥಿತಿಯೂ ಉಂಟಾಗಿತ್ತು. ಈ ಮಧ್ಯೆ ಕೆಲವು ತಿಂಗಳು ಬಾಡಿಗೆ ಕೊಡುವ ಸ್ಥಿತಿಯಲ್ಲಿಲ್ಲವೆಂದು ನವೀನ್ ಅವರು ಮನೆ ಖಾಲಿ ಮಾಡಿಕೊಂಡಿದ್ದರು. ಆದರೆ ಇದೀಗ ಮತ್ತೆ ಹಿಂದಿನ ಬಾಡಿಗೆ ಮನೆಯಲ್ಲಿಯೇ ವಾಸವಿದ್ದರು.

ಭೀಕರ ಕೃತ್ಯ

ನಿನ್ನೆ ರಾತ್ರಿ ಗಂಡ ಹೆಂಡತಿಯ ನಡುವೆ ಗಲಾಟೆ ನಡೆದಿದ್ದು, ಅದೇ ವೇಳೆ ನವೀನ್ ಪತ್ನಿ ಗೀತಾಳನ್ನು ಚಾಕುವಿನಿಂದ 25ಕ್ಕೂ ಹೆಚ್ಚು ಬಾರಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇಂದು ಬೆಳಿಗ್ಗೆ ಬಾಡಿಗೆ ಹಣ ತರುತ್ತೇನೆಂದು ಮಾಲೀಕರ ಮಗ ಬಂದು ಮನೆಯ ಬಾಗಿಲು ತೆರೆದಾಗ ಗೀತಾ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿರುವುದು ಕಂಡುಬಂದಿದೆ. ಕೂಡಲೇ ಈ ಕುರಿತು ಮಾಲೀಕರು ಪೊಲೀಸರು ಹಾಗೂ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಎಸ್‌ಪಿ, ಡಿವೈಎಸ್‌ಪಿ, ಎಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನ ದಳ, ಬೆರಳಚ್ಚು ತಂಡ ಸ್ಥಳಕ್ಕೆ ಧಾವಿಸಿವೆ. ಹತ್ಯೆ ಬಳಿಕ ನಾಪತ್ತೆಯಾಗಿರುವ ನವೀನ್ ಪತ್ತೆ ಹಚ್ಚಲು ಭಾರೀ ಹುಡುಕಾಟ ನಡೆದಿದೆ.

See also  ಉಡುಪಿಯ ತ್ರಾಸಿ ಬೀಚ್‌ ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ ..! ಪ್ರವಾಸಿಗ ಪಾರು, ಬೋಟ್ ರೈಡರ್ ಕಣ್ಮರೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget