Latest

ಧರ್ಮಸ್ಥಳ ಮೂಲದ ಆಕಾಂಕ್ಷ ನಿಗೂಢ ಸಾವು ಪ್ರಕರಣ,ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ಒತ್ತಾಯಿಸಿದ ದಿನೇಶ್‌ ಗುಂಡೂರಾವ್

355

ನ್ಯೂಸ್ ನಾಟೌಟ್:ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟ ಘಟನೆಗೆ ಸಂಬಂಧ ಪಟ್ಟ ಹಾಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಸೂಕ್ತ ತನಿಖೆ ನಡೆಸುವಂತೆ ಪಂಜಾಬ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹೆಣ್ಣು ಮಗುವಿಗೆ ನ್ಯಾಯ ಸಿಗಬೇಕೆಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಹೀಗಾಗಿ ಆಕೆಯ ನಿಗೂಢ ಸಾವಿಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ಈ ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿಯವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಆಕಾಂಕ್ಷ ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.ಈ ಸಂಬಂಧ ಆತ್ಮಹತ್ಯೆಗೆ ಪ್ರೇರಣೆ ಆರೋಪದ ಮೇಲೆ ಯುನಿವರ್ಸಿಟಿಯ ಪ್ರೊಫೆಸರ್ ಮ್ಯಾಥ್ಯೂ ವಿರುದ್ಧ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವ ಹೂತ ಪ್ರಕರಣ, ಕೆಲವೇ ಕ್ಷಣಗಳಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಲಿರುವ ಇನ್ನೋರ್ವ ಅನಾಮಿಕ ವ್ಯಕ್ತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget