ಕರಾವಳಿಪುತ್ತೂರುರಾಜಕೀಯ

ಮತ್ತೊಮ್ಮೆ ಅವಕಾಶ ಸಿಕ್ಕಿದರೆ ಕಾರ್ಕಳದ ಇನ್ನಷ್ಟು ಅಭಿವೃದ್ಧಿಗೆ ಸಿದ್ಧ: ವಿ ಸುನಿಲ್ ಕುಮಾರ್‌

282

ನ್ಯೂಸ್ ನಾಟೌಟ್ : ಕಾರ್ಕಳದಲ್ಲಿ ಮತ್ತೊಮ್ಮೆ ಮತದಾರರು ಅವಕಾಶ ನೀಡಬೇಕು. ನೀವು ಅವಕಾಶ ನೀಡಿದರೆ ಇನ್ನಷ್ಟು ಅಭಿವೃದ್ಧಿಗೆ ಸಿದ್ಧ ಎಂದು ಕಾರ್ಕಳದ ಬಿಜೆಪಿಯ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ಮಾಳದಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಈದು ಮಾಳದಂತಹ ಗ್ರಾಮೀಣ ಭಾಗದ ರಸ್ತೆಗಳಿಗೆ ಕಾಯಕಲ್ಪ ಸೇತುವೆ ನಿರ್ಮಾಣ, ಕಿಂಡಿ ಅಣೆಕಟ್ಟು ನಿರ್ಮಾಣ, ವಿದ್ಯುತ್‌ ಸಮಸ್ಯೆಗೆ ಪರಿವರ್ತಕ, ಸಬ್‌ ಸ್ಟೇಶನ್‌, ಬಡವರಿಗೆ ಹಕ್ಕುಪತ್ರ ವಿತರಣೆ ಮೊದಲಾದ ಮೂಲಭೂತ ಸೌಕರ್ಯ ಕಲ್ಪಿಸಿ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸಿದ್ದೇನೆ. ಮತ್ತೊಮ್ಮೆ ಆಶೀರ್ವಸಿದಿಸಿದರೆ ಗ್ರಾಮಗಳ ಕಲ್ಯಾಣಕ್ಕೆ ಭರಪೂರ ಕೊಡುಗೆ ನೀಡುವುದಕ್ಕೆ ಅವಕಾಶವಾಗುತ್ತದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಪ್ರಮುಖರಾದ ರೋಹಿತ್ ಹೆಗಡೆ ಎರ್ಮಲ್, ಹರೀಶ್ ಶೆಟ್ಟಿ ಎರ್ಮಲ್, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಸುಳ್ಯ: ಹಳೆಗೇಟು 'ಗಣೇಶ ಚತುರ್ಥಿ' ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿ ಕೂಪನ್ : ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು,ವಿಚಾರಣೆ ವೇಳೆ ಯುವಕ ಹೇಳಿದ್ದೇನು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget